‘ಶಕ್ತಿ’ ಫಲಶ್ರುತಿ

ಗೋಣಿಕೊಪ್ಪಲು, ಫೆ. ೨೪: ಗೋಣಿಕೊಪ್ಪ ಹಾಗೂ ಅರುವತ್ತೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ದುರಸ್ಥಿಯಲ್ಲಿದ್ದು ಸಾರ್ವಜನಿಕರಿಗೆ ಇದರಿಂದ ಪ್ರಯೋಜನವಾಗುತ್ತಿಲ್ಲ ಎಂಬ ‘ಶಕ್ತಿ’ ವರದಿಗೆ ಕೊಡಗು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆಕಾಶ್ ಸ್ಪಷ್ಟನೆ ನೀಡಿದ್ದು ಈ ಬಗ್ಗೆ ಕೂಡಲೇ ಕ್ರಮವಹಿಸುವುದಾಗಿ ‘ಶಕ್ತಿ’ಗೆ ತಿಳಿಸಿದ್ದಾರೆ.

ಗೋಣಿಕೊಪ್ಪ ಹಾಗೂ ಅರುವತ್ತೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಯಲ್ಲಿದ್ದು ಈ ಬಗ್ಗೆ ಸಾರ್ವಜನಿಕರು ತಮ್ಮ ತೀವ್ರ ಅಸಮಧಾನ ಕುರಿತಾಗಿ ‘ಶಕ್ತಿ’ ಸಮಗ್ರ ವರದಿ ಪ್ರಕಟಿಸಿ ಗಮನ ಸೆಳೆದಿತ್ತು. ಸುದ್ದಿಯನ್ನು ಗಮನಿಸಿದ ಸಿಇಓ ಡಾ. ಆಕಾಶ್‌ರವರು ಈ ಬಗ್ಗೆ ಸಂಬAಧಿಸಿದ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಗೆ ಮಾಹಿತಿ ರವಾನಿಸಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ವಿದ್ಯುತ್ ವ್ಯತ್ಯಯದಿಂದಾಗಿ ನೀರಿನ ಘಟಕದ ಮೋಟಾರ್ ದುರಸ್ತಿ ಗೊಂಡಿರುವು ದಾಗಿಯೂ ಕೂಡಲೇ ಇದನ್ನು ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ.

ಕಳೆದ ಡಿಸೆಂಬರ್ ತಿಂಗಳಿನಲ್ಲಿ ಈ ಬಗ್ಗೆ ಪಂಚಾಯಿತಿ ಮಟ್ಟದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಯನ್ನು ಪಡೆಯಲಾಗಿತ್ತು. ಎಲ್ಲಾ ಘಟಕಗಳು ಸುಲಲಿತವಾಗಿ ಕಾರ್ಯನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿತ್ತು. ಇದೀಗ ಹಲವು ಕಡೆ ಸಮಸ್ಯೆ ಎದುರಾಗಿರುವ ಮಾಹಿತಿ ಲಭ್ಯವಾಗಿದ್ದು ಕ್ರಮ ಕೈಗೊಳ್ಳುವುದಾಗಿ ಸಿಇಓ ಡಾ. ಆಕಾಶ್ ತಿಳಿಸಿದ್ದಾರೆ.

-ಹೆಚ್.ಕೆ. ಜಗದೀಶ್