ಮಡಿಕೇರಿ, ಫೆ. ೨೩: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ತ್ರಿಪದಿಕವಿ ಶ್ರೀ ಸರ್ವಜ್ಞ ಜಯಂತಿ ಕಾರ್ಯಕ್ರಮವು ತಾ. ೨೮ ರಂದು ಬೆಳಗ್ಗೆ ೧೦.೩೦ ಗಂಟೆಗೆ ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ. ಬೋಪಯ್ಯ, ಸಂಸದ ಪ್ರತಾಪ್ ಸಿಂಹ, ಶಾಸಕ ಎಂ.ಪಿ. ಸುಜಾ ಕುಶಾಲಪ್ಪ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿ ಕಾಳಪ್ಪ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.