ಮಡಿಕೇರಿ, ಫೆ. ೨೩: ಕಡಗದಾಳು ಕಾರ್ನರ್ ಫ್ರೆಂಡ್ಸ್ ವತಿಯಿಂದ ೯ನೇ ವರ್ಷದ ವಾಲಿಬಾಲ್ ಪಂದ್ಯಾಟ ತಾ. ೨೫ ರಂದು ಕಡಗದಾಳು ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಸ್ಥಾಪಕ ಎಸ್.ಯು. ಜಲೀಲ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಮಟ್ಟ ಹಾಗೂ ಜಿಲ್ಲಾ ಮಟ್ಟದ ೨ ಹಂತದ ಪಂದ್ಯಾವಳಿ ನಡೆಯಲಿದ್ದು, ರಾಜ್ಯ ಮಟ್ಟದಲ್ಲಿ ಆಹ್ವಾನಿತ ೮ ತಂಡಗಳು ಭಾಗವಹಿಸಲಿವೆ. ಜಿಲ್ಲಾ ಮಟ್ಟದಲ್ಲಿ ನೋಂದಣಿಗೊAಡ ೧೦ ತಂಡಗಳು ಸೆಣಸಾಡಲಿವೆ. ಬೆಳಿಗ್ಗೆ ೧೦.೩೦ ರಿಂದ ಜಿಲ್ಲಾ ಮಟ್ಟದ ಪಂದ್ಯಾವಳಿ ನಡೆದು, ಸಂಜೆ ೭ ಗಂಟೆಯ ಬಳಿಕ ಹೊನಲು ಬೆಳಕಿನ ರಾಜ್ಯ ಮಟ್ಟದ ಪಂದ್ಯಾವಳಿ ನಡೆಯಲಿದೆ. ವಿಜೇತ ತಂಡಗಳಿಗೆ ಆಕರ್ಷಕ ಟ್ರೋಫಿ ಹಾಗೂ ನಗದು ನೀಡಲಾಗುವುದು ಎಂದರು.

ಗೋಷ್ಠಿಯಲ್ಲಿ ಸಂಘದ ಖಜಾಂಜಿ ಪ್ರಸಾದ್, ಸದಸ್ಯರುಗಳಾದ ದಿನು ಸೋಮಣ್ಣ, ದಿಲನ್ ಪಳಂಗಪ್ಪ ಹಾಜರಿದ್ದರು.