ಸೋಮವಾರಪೇಟೆ, ಫೆ. ೨೪: ಇಲ್ಲಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ಧಾರ್ಮಿಕ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಉದ್ಘಾಟಿಸಿದರು. ಮಡಿಕೇರಿ ಪ್ರಜಾಪಿತ ಬ್ರಹ್ಮಕುಮಾರಿ ವಿದ್ಯಾಲಯದ ರಾಜಯೋಗಿನಿ ಬಿ.ಕೆ. ಧನಲಕ್ಷಿö್ಮÃ ಅವರು ಶಿವರಾತ್ರಿಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ಪಟ್ಟಣ ಪಂಚಾಯಿತಿ ಸದಸ್ಯ ಬಿ.ಆರ್. ಮಹೇಶ್, ಬ್ರಹ್ಮಕುಮಾರಿ ವಿದ್ಯಾಲಯದ ಎಂ.ಸಿ. ಮುದ್ದಪ್ಪ, ಬಿ.ಕೆ. ಶಾಲಿನಿ, ಶಮ್ಮಿ ಮುದ್ದಪ್ಪ, ಕವಿತಾ, ಸುರೇಶ್, ವಿಜೇಂದ್ರ, ರತ್ನ ಕುಶಾಲನಗರ, ವೀರಾಜಪೇಟೆ ಸಂಸ್ಥೆಯ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.