ಸೋಮವಾರಪೇಟೆ, ಫೆ. ೨೫: ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರು ಜಖಂಗೊAಡಿರುವ ಘಟನೆ ಐಗೂರು ಗ್ರಾಮದ ತಿರುವಿನಲ್ಲಿ ನಡೆದಿದೆ.
ಮುರ್ನಾಡು ಗ್ರಾಮದ ಮೋಹನ್ ದಂಪತಿ ಕಾರಿನಲ್ಲಿ ಮಡಿಕೇರಿ ಕಡೆಗೆ ತೆರಳುತ್ತಿದ್ದರು. ಮಡಿಕೇರಿಯಿಂದ ಸೋಮವಾರಪೇಟೆಗೆ ಹೋಗುತ್ತಿದ್ದ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ಮೋಹನ್ ಅವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಸೋಮವಾರಪೇಟೆ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.