ಕೂಡಿಗೆ, ಫೆ. ೨೫: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಅಳುವಾರ ಗ್ರಾಮದ ಸಮೀಪದ ಭೈರಪ್ಪನಗುಡಿ ಗ್ರಾಮದಲ್ಲಿ ನೂತನವಾಗಿ ಶಾಸಕರ ನಿಧಿಯಿಂದ ನಿರ್ಮಾಣಗೊಂಡ ರೂ. ೫ ಲಕ್ಷ ವೆಚ್ಚದ ಸಾಮೂಹಿಕ ಸಮುದಾಯ ಭವನದ ನೂತನ ಕಟ್ಟಡದ ಉದ್ಘಾಟನೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ಸಾಮೂಹಿಕ ಸಮುದಾಯ ಭವನದ ಕಟ್ಟಡಗಳು ಇದ್ದರೆ ಗ್ರಾಮದ ಶುಭ ಕಾರ್ಯಗಳನ್ನು ನಡೆಸಲು ಅನುಕೂಲವಾಗುವುದು. ಅಲ್ಲದೆ ಗ್ರಾಮಸ್ಥರು ಒಂದೆಡೆ ಸೇರಿ ಗ್ರಾಮದ ಅಭಿವೃದ್ಧಿಗೆ ಪೂರಕವಾದ ಅಂಶಗಳನ್ನು ಚರ್ಚಿಸಲು ಮತ್ತು ಗ್ರಾಮದ ದೇವಾಲಯದ ಸಭೆಗಳನ್ನು ನಡೆಸಲು ಸಹಕಾರಿಯಾಗುತ್ತದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ ಮಹೇಶ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಚಿಕ್ಕ ಅಳುವಾರದ ಜ್ಞಾನ ಕಾವೇರಿ ವಿಶ್ವವಿದ್ಯಾನಿಲಯದ ನಿರ್ದೇಶಕ ಪ್ರೊ. ಕೆ.ಕೆ. ಧರ್ಮಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಬಿ. ದೇವರಾಜ್, ಶೋಭ ಪ್ರಕಾಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೆಚ್.ಎಸ್. ಶ್ರೀನಿವಾಸ್, ತೊರೆ ನೂರು ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಹೆಚ್.ಬಿ. ಚಂದ್ರಪ್ಪ, ಗ್ರಾಮದ ಪ್ರಮುಖರಾದ ಟಿ.ಟಿ. ತಿಮ್ಮಯ್ಯ, ಈರಯ್ಯ ಸೇರಿದಂತೆ ಇತರರು ಹಾಜರಿದ್ದರು.೪