ಮಡಿಕೇರಿ, ಫೆ. ೨೫: ಕೊಡಗು ಜಿಲ್ಲಾ ವಕ್ಫ್ ಸಲಹಾ ಸಮಿತಿ ವತಿಯಿಂದ ತಾ.೨೬ರಂದು (ಇಂದು) ಜಿಲ್ಲಾಮಟ್ಟದ ವಕ್ಫ್ ಸಮ್ಮಿಟ್ ಕಾರ್ಯಾಗಾರ ನಡೆಯಲಿದೆ.
ನಗರದ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದ ಹಿಂಭಾಗದ ಹೊಟೇಲ್ ದೋಹಕಿಂಗ್ ಸಭಾಂಗಣದಲ್ಲಿ ಅಪರಾಹ್ನ ೨.೩೦ ಗಂಟೆಗೆ ಕೊಡಗು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಪಿ.ಎಂ. ಹಕೀಂ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಾಗಾರದಲ್ಲಿ ಜಿಲ್ಲೆಯ ನೋಂದಾಯಿತ ವಕ್ಫ್ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಧರ್ಮ ಗುರುಗಳಿಗೆ ವಕ್ಫ್ ಕಾಯ್ದೆ ಮತ್ತು ವಕ್ಫ್ ಸಂಸ್ಥೆಯಿAದ ಲಭಿಸುವ ಯೋಜನೆಗಳ ಕುರಿತು ಮಾಹಿತಿ ನೀಡಲಾಗುವುದು.
ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ತು ಸದಸ್ಯ ಎಂ.ಪಿ. ಸುಜಾಕುಶಾಲಪ್ಪ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಮೌಲಾನಾ ಶಾಫಿ ಸಅದಿ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪಾಲ್ಗೊಳ್ಳಲಿದ್ದಾರೆ.
ಜಿಲ್ಲಾ ಸಹಾಯಕ ಖಾಝಿಗಳಾದ ಅಬ್ದುಲ್ಲಾ ಫೈಝಿ ಎಡಪಾಲ ಹಾಗೂ ಶಾದುಲಿ ಫೈಝಿ ಕೊಂಡAಗೇರಿ ಪ್ರಾರ್ಥನೆ ಹಾಗೂ ಆಶೀರ್ವಚನ ನೀಡಲಿದ್ದು, ವಿಶೇಷ ಆಹ್ವಾನಿತರಾಗಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಸದಸ್ಯ ಜಿ.ಯಾಕುಬ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.