ವೀರಾಜಪೇಟೆ, ಫೆ. ೨೬: ವಿಶೇಷ ಅನುದಾನದ ರೂ. ೧ ಕೋಟಿ ಪ್ಯಾಕೇಜ್‌ನಡಿಯಲ್ಲಿ ವೀರಾಜಪೇಟೆ ತಾಲೂಕಿನ ಕಾರ್ಮಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾವಾಡಿ ಗ್ರಾಮದ ಕಾವಾಡಿಚಂಡ ಐನ್‌ಮನೆ ರಸ್ತೆ ಮತ್ತು ಕಾವಾಡಿ ಭಗವತಿ ದೇವಸ್ಥಾನದ ಕಾವಾಡಿಚಂಡ ಕುಟುಂಬದ ರಸ್ತೆ ಅಭಿವೃದ್ದಿಗೆ ವಿಧಾನ ಪರಿಷತ್ತಿನ ಸದಸ್ಯರ ವಿಶೇಷ ಅನುದಾನ ರೂ. ೫ಲಕ್ಷ ವೆಚ್ಚದ ಕಾಮಗಾರಿಗೆ ಎಂಎಲ್‌ಸಿ ಮಂಡೇಪAಡ ಸುಜಾ ಕುಶಾಲಪ್ಪ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಸುಜಾ ಕುಶಾಲಪ್ಪ ಅವರು ಕೆಲವೇ ದಿನಗಳಲ್ಲಿ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿಗೊಳಿ ಸಲಾಗುವುದು. ರಸ್ತೆ ಕಾಮಗಾರಿಗಳು ನಡೆಯುವ ಸಂದರ್ಭ ಸ್ಥಳಿಯರು ಸಹಕಾರ ನೀಡಬೇಕು, ಮೂಲಭೂತ ಸೌಲಭ್ಯಗಳನ್ನು ಸರಕಾರದಿಂದ ಒದಗಿಸಿಕೊಡಲಾಗುತ್ತದೆ. ಹಾಗೆಯೇ ರಾಜ್ಯ ಸರಕಾರ ಕೊಡಗಿನ ಅಭಿವೃದ್ದಿ ದೃಷ್ಟಿಯಿಂದ ಬಹಳಷ್ಟು ಅನುದಾನಗಳನ್ನು ಒದಗಿಸಿಕೊಟ್ಟು ಸಹಕರಿಸಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವುದಾಗಿ ತಿಳಿಸಿದರು.

ಬಿಜೆಪಿ ಪ್ರಮುಖರಾದ ಮಾಚಿಮಂಡ ಸುವಿನ್ ಗಣಪತಿ ಮಾತನಾಡಿ ಗ್ರಾಮೀಣ ಭಾಗದ ರಸ್ತೆಗಳಿಗೆ ವಿಧಾನ ಪರಿಷತ್ತಿನ ಸದಸ್ಯರಾದ ಸುಜಾ ಕುಶಾಲಪ್ಪ ಅವರು ತಮ್ಮ ಜನಪರ ಕಾಳಜಿಯಿಂದ ವಿಶೇಷ ಮುತುವರ್ಜಿ ವಹಿಸಿ ಸರಕಾರದಿಂದ ಕೊಡಗಿಗೆ ವಿಶೇಷ ಅನುದಾನ ತಂದು ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಶ್ರಮ ವಹಿಸಿದ್ದಾರೆ. ಆದಷ್ಟು ಬೇಗ ರಸ್ತೆ ಕಾಮಗಾರಿ ಪ್ರಾರಂಭ ಗೊಂಡು ಸಾರ್ವಜನಿಕ ಬಳಕೆಗೆ ಅವಕಾಶವಾಗಲಿದೆ. ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ಸರ್ಕಾರ ಒದಗಿಸಲಿದೆ. ಈ ನಿಟ್ಟಿನಲ್ಲಿ ಸ್ಥಳೀಯರು ಸಹ ಸಹಕರಿಸಬೇಕು ಎಂದು ಹೇಳಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಬಿ. ನಾಣಯ್ಯ, ಮಾಜಿ ಅಧ್ಯಕ್ಷ ಕಾವಾಡಿಚಂಡ ಗಣಪತಿ ಹಾಗೂ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ಗುತ್ತಿಗೆದಾರರಾದ ಧನು ಹಾಗೂ ವಿನು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು. ಅಭಿವೃದ್ಧಿ ಯೋಜನೆಗೆ ಭೂಮಿಪೂಜೆ

ವೀರಾಜಪೇಟೆ, ಫೆ. ೨೬: ವಿಶೇಷ ಅನುದಾನದ ರೂ. ೧ ಕೋಟಿ ಪ್ಯಾಕೇಜ್‌ನಡಿಯಲ್ಲಿ ವೀರಾಜಪೇಟೆ ತಾಲೂಕಿನ ಕಾರ್ಮಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾವಾಡಿ ಗ್ರಾಮದ ಕಾವಾಡಿಚಂಡ ಐನ್‌ಮನೆ ರಸ್ತೆ ಮತ್ತು ಕಾವಾಡಿ ಭಗವತಿ ದೇವಸ್ಥಾನದ ಕಾವಾಡಿಚಂಡ ಕುಟುಂಬದ ರಸ್ತೆ ಅಭಿವೃದ್ದಿಗೆ ವಿಧಾನ ಪರಿಷತ್ತಿನ ಸದಸ್ಯರ ವಿಶೇಷ ಅನುದಾನ ರೂ. ೫ಲಕ್ಷ ವೆಚ್ಚದ ಕಾಮಗಾರಿಗೆ ಎಂಎಲ್‌ಸಿ ಮಂಡೇಪAಡ ಸುಜಾ ಕುಶಾಲಪ್ಪ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಸುಜಾ ಕುಶಾಲಪ್ಪ ಅವರು ಕೆಲವೇ ದಿನಗಳಲ್ಲಿ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿಗೊಳಿ ಸಲಾಗುವುದು. ರಸ್ತೆ ಕಾಮಗಾರಿಗಳು ನಡೆಯುವ ಸಂದರ್ಭ ಸ್ಥಳಿಯರು ಸಹಕಾರ ನೀಡಬೇಕು, ಮೂಲಭೂತ ಸೌಲಭ್ಯಗಳನ್ನು ಸರಕಾರದಿಂದ ಒದಗಿಸಿಕೊಡಲಾಗುತ್ತದೆ. ಹಾಗೆಯೇ ರಾಜ್ಯ ಸರಕಾರ ಕೊಡಗಿನ ಅಭಿವೃದ್ದಿ ದೃಷ್ಟಿಯಿಂದ ಬಹಳಷ್ಟು ಅನುದಾನಗಳನ್ನು ಒದಗಿಸಿಕೊಟ್ಟು ಸಹಕರಿಸಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವುದಾಗಿ ತಿಳಿಸಿದರು.

ಬಿಜೆಪಿ ಪ್ರಮುಖರಾದ ಮಾಚಿಮಂಡ ಸುವಿನ್ ಗಣಪತಿ ಮಾತನಾಡಿ ಗ್ರಾಮೀಣ ಭಾಗದ ರಸ್ತೆಗಳಿಗೆ ವಿಧಾನ ಪರಿಷತ್ತಿನ ಸದಸ್ಯರಾದ ಸುಜಾ ಕುಶಾಲಪ್ಪ ಅವರು ತಮ್ಮ ಜನಪರ ಕಾಳಜಿಯಿಂದ ವಿಶೇಷ ಮುತುವರ್ಜಿ ವಹಿಸಿ ಸರಕಾರದಿಂದ ಕೊಡಗಿಗೆ ವಿಶೇಷ ಅನುದಾನ ತಂದು ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಶ್ರಮ ವಹಿಸಿದ್ದಾರೆ. ಆದಷ್ಟು ಬೇಗ ರಸ್ತೆ ಕಾಮಗಾರಿ ಪ್ರಾರಂಭ ಗೊಂಡು ಸಾರ್ವಜನಿಕ ಬಳಕೆಗೆ ಅವಕಾಶವಾಗಲಿದೆ. ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ಸರ್ಕಾರ ಒದಗಿಸಲಿದೆ. ಈ ನಿಟ್ಟಿನಲ್ಲಿ ಸ್ಥಳೀಯರು ಸಹ ಸಹಕರಿಸಬೇಕು ಎಂದು ಹೇಳಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಬಿ. ನಾಣಯ್ಯ, ಮಾಜಿ ಅಧ್ಯಕ್ಷ ಕಾವಾಡಿಚಂಡ ಗಣಪತಿ ಹಾಗೂ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ಗುತ್ತಿಗೆದಾರರಾದ ಧನು ಹಾಗೂ ವಿನು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.