ನಾಪೋಕ್ಲು, ಫೆ. ೨೬: ಬಿಜೆಪಿ ಆಡಳಿತದ ಅವಧಿಯಲ್ಲಿ ಆಚಾರ, ವಿಚಾರ ಸಂಸ್ಕೃತಿಯನ್ನು ಬೆಳೆಸುತ್ತಾ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಆದ್ಯತೆ ನೀಡಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ಹೇಳಿದರು. ರೂ. ೧.೩೦ ಕೋಟಿ ವೆಚ್ಚದಲ್ಲಿ ಕೋಟೇರಿ-ಬೊಮ್ಮಂಜಕೇರಿ-ಮೂಟೇರಿ ಸಂಪರ್ಕ ರಸ್ತೆಯ ಮರುಡಾಮರೀಕರಣ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಕೋಟೇರಿಯಲ್ಲಿ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಸರ್ಕಾರದ ವಿಧಾನಸಭೆಯ ಕೊನೆಯ ಅಧಿವೇಶನ ಮುಗಿದಿದೆ. ಮಾರ್ಚ್ ಅಂತ್ಯದೊಳಗೆ ಕೈಗೆತ್ತಿಕೊಂಡ ಎಲ್ಲಾ ಕಾಮಗಾರಿಗಳನ್ನು ಮುಗಿಸಲಾಗುವುದು. ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ಸಾಗುತ್ತಿವೆ ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷಗಳ ಕಾಲ ಅಭಿವೃದ್ಧಿ ಕಾರ್ಯ ಸ್ಥಗಿತಗೊಂಡಿದ್ದು ಹಲವು ಸಂಪರ್ಕ ರಸ್ತೆಗಳು ಹಾಳಾಗಿದ್ದವು. ಇದೀಗ ರಸ್ತೆಗಳನ್ನು ಮರುಡಾಮರೀಕರಣ ಮಾಡಿ ಜನರಿಗೆ ಸೌಕರ್ಯ ಒದಗಿಸಲಾಗುತ್ತದೆ ಎಂದರು.

ಅಪ್ಪಾರAಡ ಅಪ್ಪಯ್ಯ ಪ್ರಾರ್ಥನೆ ನೆರವೇರಿಸಿ ಮಾತನಾಡಿ ಶಾಸಕರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಉತ್ತಮ ಕೆಲಸ ಕಾರ್ಯಗಳು ಆಗಿವೆ ಎಂದರು.

ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರಿಯಪ್ಪ, ಮಡಿಕೇರಿ ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೋಡಿರ ಪ್ರಸನ್ನ, ತಾಲೂಕು ಬಿಜೆಪಿ ಕಾರ್ಯದರ್ಶಿ ಅಮ್ಮಂಡ ಮನು ಮಹೇಶ್, ರೈತ ಮೋರ್ಚಾ ತಾಲೂಕು ಅಧ್ಯಕ್ಷ ಶಿವಚಾಳಿಯಂಡ ಜಗದೀಶ್, ಗ್ರಾಮ ಪಂಚಾಯಿತಿ ಸದಸ್ಯೆ ನೀಲಮ್ಮ, ಪ್ರಮುಖರಾದ ಅಪ್ಪಾರಂಡ ಸುಭಾಷ್ ತಿಮ್ಮಯ್ಯ, ಅಪ್ಪಾರಂಡ ಸುಧೀರ್ ಅಯ್ಯಪ್ಪ, ಅಪ್ಪಾರಂಡ ಶ್ಯಾಂ, ಕಂಗಾAಡ ಜಾಲಿ ಪೂವಪ್ಪ, ಬೆಳೆಗಾರ ಬಿದ್ದಾಟಂಡ ಜಿನ್ನು ನಾಣಯ್ಯ, ಸಂಪತ್, ಪುಲ್ಲೆರ ವಿಠಲ ಪಳಂಗಪ್ಪ, ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಅಶೋಕ್, ಹಿರಿಯ ಇಂಜಿನಿಯರ್ ಸಂತೋಷ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು ಮೂಟೇರಿ ದೇವಾಲಯದ ಅರ್ಚಕ ಕೀರ್ತಿಶ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. -ದುಗ್ಗಳ