ಮಡಿಕೇರಿ, ಫೆ. ೨೬: ಕರ್ನಾಟಕ ರಾಜ್ಯ ಎಸ್ಸಿ-ಎಸ್ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿ ಕೊಡಗು ಜಿಲ್ಲಾ ಶಾಖೆ ಉದ್ಘಾಟನೆ ಮತ್ತು ಪದಗ್ರಹಣ ಕಾರ್ಯಕ್ರಮ ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಜಿಲ್ಲಾ ಅಧ್ಯಕ್ಷ ಮಹೇಂದ್ರ ಶಿವಮಣಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಅಧ್ಯಕ್ಷ ಶಿವಶಂಕರ್, ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ವಕೀಲ ಪ್ರೊ. ಹರಿರಾಮ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಕೊಡಗು ಜಿಲ್ಲಾ ಅಧ್ಯಕ್ಷರಾಗಿ ಮಹೇಂದ್ರ ಶಿವಮಣಿ. ಜಿಲ್ಲಾ ಉಪಾಧ್ಯಕ್ಷರಾಗಿ ರಾಣಿ, ಜಿಲ್ಲಾ ಕಾರ್ಯದರ್ಶಿಯಾಗಿ ಚಂದ್ರಮೌಳಿ, ಖಜಾಂಚಿಯಾಗಿ ಮಂಜುನಾಥ, ಮಡಿಕೇರಿ ತಾಲೂಕು ಅಧ್ಯಕ್ಷರಾಗಿ ಜನಾರ್ದನ, ಕುಶಾಲನಗರ ತಾಲೂಕು ಅಧ್ಯಕ್ಷರಾಗಿ ನಂದೀಶ, ವೀರಾಜಪೇಟೆ ತಾಲೂಕಿನ ಅಧ್ಯಕ್ಷರಾಗಿ ಮಹೇಶ್, ಸೋಮವಾರಪೇಟೆ ತಾಲೂಕು ಅಧ್ಯಕ್ಷರಾಗಿ ದಿನೇಶ್ ಹಾಗೂ ಪದಾಧಿಕಾರಿಗಳು ಪದಗ್ರಹಣ ಮಾಡಿದರು.

ಈ ಸಂದರ್ಭ ಪವಿತ್ರ, ಹುಸೇನ್ ಮುಲ್ಲಾ, ಹೆಚ್.ಡಿ. ಹರೀಶ್ ಮತ್ತು ಡಾ. ಮಮತಾ ವೈ ಅವರುಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು, ಮಂಡ್ಯ, ಮೈಸೂರು, ಹಾಸನ ಜಿಲ್ಲಾ ಅಧ್ಯಕ್ಷರು, ಸದಸ್ಯರು ಹಾಗೂ ಇತರ ಪ್ರಮುಖರು ಭಾಗವಹಿಸಿದ್ದರು.