ಕುಶಾಲನಗರ, ಫೆ. ೨೬. ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕದ ಆಶ್ರಯದಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ ಕುಶಾಲನಗರದಲ್ಲಿ ನಡೆಯಿತು.
ಕುಶಾಲನಗರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆದ ಕ್ರೀಡಾಕೂಟಕ್ಕೆ ಶ್ರೀ ಸದಾಶಿವ ಸ್ವಾಮೀಜಿ ಸಾನಿಧ್ಯದಲ್ಲಿ ಕುಶಾಲನಗರ ಡಿವೈಎಸ್ಪಿ ಗಂಗಾಧರಪ್ಪ ಅವರು ಕ್ರೀಡಾ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.
ಸಮುದಾಯ ಬಾಂಧವರಿಗೆ ಕ್ರಿಕೆಟ್ ಪಂದ್ಯಾಟ, ಹಗ್ಗ ಜಗ್ಗಾಟ, ಗುಂಪು ಆಟಗಳು, ಬಾಲಕ ಬಾಲಕಿಯರಿಗೆ ವೈಯಕ್ತಿಕ ಸ್ಪರ್ಧೆಗಳು ವಿವಿಧ ಆಟೋಟ ಸ್ಪರ್ಧೆ ನಡೆಯಿತು. ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.
ಹಿರಿಯ ವಕೀಲರಾದ ಹೆಚ್.ಎಸ್. ಚಂದ್ರಮೌಳಿ ಪಾಲ್ಗೊಂಡು ಕ್ರೀಡಾಪಟುಗಳಿಗೆ ಶುಭ ಕೋರಿದರು. ವೀರಶೈವ ಮಹಾಸಭಾ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ವಿ. ಶಿವಪ್ಪ, ಪ್ರಧಾನ ಕಾರ್ಯದರ್ಶಿ ಶಾಂಭ ಶಿವಯ್ಯ, ಖಜಾಂಚಿ ಉದಯ್ ಕುಮಾರ್, ತಾಲೂಕು ಅಧ್ಯಕ್ಷ ಹೆಚ್.ಎಂ. ಮಧುಸೂದನ್, ಎಂ.ಬಿ. ಹರೀಶ, ಮಹಿಳಾ ಘಟಕದ ಕಮಲ ಉದಯ್, ಸಮುದಾಯದ ಪ್ರಮುಖರು ಪಾಲ್ಗೊಂಡಿದ್ದರು.