ಸೋಮವಾರಪೇಟೆ, ಫೆ. ೨೭: ೭ನೇ ವೇತನ ಆಯೋಗ ಜಾರಿ ಸೇರಿದಂತೆ ರಾಜ್ಯ ಸರಕಾರಿ ನೌಕರರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘವು ಮಾರ್ಚ್ ೧ ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸೋಮವಾರಪೇಟೆ ತಾಲೂಕು ಘಟಕ ಸಂಪೂರ್ಣ ಬೆಂಬಲ ನೀಡುತ್ತಿದೆ ಎಂದು ತಾಲೂಕು ಘಟಕದ ಅಧ್ಯಕ್ಷ ಪ್ರದೀಪ್ ತಿಳಿಸಿದರು.

ಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಎನ್.ಎಂ.ನಾಗೇಶ್, ಖಜಾಂಚಿ ವಿ.ಜಿ.ದಿನೇಶ್, ಸಂಘಟನಾ ಕಾರ್ಯದರ್ಶಿ ಗೋಪಿನಾಥ್, ಗೌರವಾಧ್ಯಕ್ಷ ಕೆ.ಎಸ್.ಪ್ರಸನ್ನ, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಪಿ.ಧರ್ಮಪ್ಪ ಇದ್ದರು.