ಮಡಿಕೇರಿ, ಫೆ. ೨೭: ಕೊಡಗು ಜಿಲ್ಲಾಡಳಿತ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಸೋಮವಾರಪೇಟೆ ಸಂತ ಜೋಸೆಫರ ಪದವಿ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ತಾ. ೨೮ ರಂದು ಬೆಳಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೩ ಗಂಟೆಯವರೆಗೆ ಸೋಮವಾರಪೇಟೆ ತಾಲೂಕಿನ ಸಂತ ಜೋಸೆಫರ ಪದವಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಡೆಯಲಿದೆ.

ಶಾಲಾ ಶಿಕ್ಷಣ, ಸಾಕ್ಷರತೆ ಮತ್ತು ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾಕುಶಾಲಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸೋಮವಾರಪೇಟೆ ಸಂತ ಜೋಸೆಫರ ವಿದ್ಯಾಸಂಸ್ಥೆಯ ಸಂಚಾಲಕರಾದ ವಂದನೀಯ ಸ್ವಾಮಿ ಎಂ.ರಾಯಪ್ಪ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಪಿ.ಕೆ.ಚಂದ್ರು ಇತರರು ಪಾಲ್ಗೊಳ್ಳಲಿದ್ದಾರೆ.