ಮೂರ್ನಾಡು, ಫೆ. ೨೭: ಮೂರ್ನಾಡು ಸಮೀಪದ ಹೊದ್ದೂರು ಗ್ರಾಮ ಪಂಚಾಯಿತಿಗೆ ಒಳಪಡುವ ಗ್ರಾಮಗಳ ಪಾಲೆಮಾಡು ನಿವಾಸಿಗಳಿಗೆ ಸರಿಯಾದ ರೀತಿಯಲ್ಲಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ಆರೋಪಿಸಿ ಬಹುಜನ ಕಾರ್ಮಿಕ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಇಂದು ಮೂರ್ನಾಡಿನ ಸೆಸ್ಕ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಕೂಡಲೇ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿದರು. ಸೆಸ್ಕ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹೊದ್ದೂರು ಗ್ರಾಮ ಪಂಚಾಯಿತಿ ಅಧಕ್ಷೆ ಕುಸುಮಾವತಿ, ಸದ್ಯಸರಾದ ಮೊಣಪ್ಪ, ಆನಂದ ಮತ್ತಿತರು ಹಾಜರಿದ್ದರು.