ಸೋಮವಾರಪೇಟೆ, ಫೆ.೨೭ : ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ರಾಷ್ಟಿçÃಯ ಆರೋಗ್ಯ ಅಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ಒಳಗುತ್ತಿಗೆ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಮುಷ್ಕರ ಮುಂದುವರಿಸಿದ್ದು, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಸತೀಶ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಹಾಗೂ ಸಂಬಳ ಹೆಚ್ಚಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಈ ಸಂದರ್ಭ ದಂತ ವೈದ್ಯರಾದ ಯಶ್ವಿನ್, ನೌಕರರಾದ ಮೋನಾಕ್ಷಿ, ಅನಿತಾ, ಚಂದ್ರಿಕಾ, ಕವಿತ ಇದ್ದರು.