ಮಡಿಕೇರಿ, ಫೆ. ೨೭: ಜಿಲ್ಲೆಯ ೫೪೨ ಮತಗಟ್ಟೆ ವ್ಯಾಪ್ತಿಯಲ್ಲಿ ಈಗಾಗಲೇ ವಿದ್ಯುನ್ಮಾನ ಮತಯಂತ್ರ (ಇವಿಎಂ) ಮತ್ತು ವಿವಿ ಪ್ಯಾಟ್ ಅರಿವು ಕುರಿತು ಪ್ರಾತ್ಯಕ್ಷಿಕೆಯು ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
ನಗರದ ಉಪ ವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಯುವ ಮತದಾರರಿಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಹೊಸದಾಗಿ ಮತದಾರರ ಗುರುತಿನ ಚೀಟಿ ಪಡೆದವರು ಪ್ರಾತ್ಯಕ್ಷಿಕೆಯ ಅವಕಾಶವನ್ನು ಬಳಸಿಕೊಳ್ಳಬೇಕು. ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುವವರೆಗೂ ಈ ಅಣಕು ಮತದಾನ ನಡೆಯಲಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದರು.
ಈಗಾಗಲೇ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿಪ್ಯಾಟ್ ಅಣಕು ಪ್ರದರ್ಶನವನ್ನು ಜಿಲ್ಲಾಧಿಕಾರಿ ಕಚೇರಿ ಹಾಗೂ ಎರಡು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅವರ ಕಚೇರಿಯಲ್ಲಿ ಏರ್ಪಡಿಸಲಾಗಿದೆ ಎಂದರು. ಹಾಗೆಯೇ ಮತಗಟ್ಟೆ ವ್ಯಾಪ್ತಿಯಲ್ಲಿ ನಿಗದಿತ ಅವಧಿಯಲ್ಲಿ ಅಣಕು ಪ್ರದರ್ಶನ ನಡೆಯಲಿದೆ ಎಂದರು. ೧೮ ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಮುಂದಾಗಬೇಕು ಎಂದರು.
ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿ ಅವರು ಕಳೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶೇ.೬೦ ಕ್ಕಿಂತ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಲ್ಲಿ ಹೆಚ್ಚಿನ ಮತದಾನವಾಗಲು ಅರಿವು ಮೂಡಿಸುವಂತೆ ಕೋರಿದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಚುನಾವಣಾಧಿಕಾರಿಗಳಾದ ಯತೀಶ್ ಉಳ್ಳಾಲ್, ಶಬಾನಾ ಎಂ.ಶೇಖ್, ರಾಜಕೀಯ ಪಕ್ಷಗಳ ಪ್ರಮುಖರಾದ ಅಪ್ಪಣ್ಣ (ಬಿಜೆಪಿ), ತೆನ್ನಿರಾ ಮೈನಾ (ಕಾಂಗ್ರೆಸ್), ಗುಲಾಬಿ (ಜೆಡಿಎಸ್), ತಹಶೀಲ್ದಾರ್ ಕಿರಣ್, ಪ್ರಶಾಂತ್, ಇತರರು ಇದ್ದರು.
ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ಮತ್ತು ಅಣಕು ಮತದಾನ ಕಾರ್ಯದ ವೇಳಾಪಟ್ಟಿ: ಮಾರ್ಚ್ ೩ ರಿಂದ ೬ ರವರೆಗೆ ಮಲ್ಲಿಕಾರ್ಜುನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊತ್ನಳ್ಳಿ, ಬೆಟ್ಟದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಂದಳ್ಳಿ ಅಂಗನವಾಡಿ ಕೇಂದ್ರ, ಹರಗ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಶಾಂತಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ತಾಳ್ತಾರೆಶೆಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಬ್ಬಿಮಠ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ತೋಳೂರುಶೆಟ್ಟಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಕೂತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ದೊಡ್ಡತೋಳೂರು ಮತ್ತು ಚಿಕ್ಕತೋಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ನಡೆಯಲಿದೆ.
ಮಾರ್ಚ್ ೭ ರಿಂದ ೯ರವರೆಗೆ ಯಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಲ್ಕಂದೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಸೋಮವಾರಪೇಟೆ (ಎಲ್ಡಬ್ಲುö್ಯ) ಒಎಲ್ವಿ ಕಾನ್ವೆಂಟ್, ಸೋಮವಾರಪೇಟೆ ಆರ್ಡಬ್ಲುö್ಯ ಒಎಲ್ವಿ ಕಾನ್ವೆಂಟ್, ಸೋಮವಾರಪೇಟೆ ಚೌಡ್ಲು ಜ್ಞಾನವಿಕಾಸ ಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳಗುಂದ (ಎಸ್ಡಬ್ಲುö್ಯ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳಗುಂದ(ಎAಡಬ್ಲುö್ಯ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳಗುಂದ(ಎನ್ಡಬ್ಲುö್ಯ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಸುಬೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೆಳೂರು (ಕಾರೆಕೊಪ್ಪ) ಅಂಗನವಾಡಿ ಕೇಂದ್ರ, ಯಡವನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.
ಮಾರ್ಚ್ ೧೦ ಮತ್ತು ೧೩ ರಂದು ತಾಕೇರಿ (ಎಲ್ಡಬ್ಲುö್ಯ), (ಆರ್ಡಬ್ಲುö್ಯ) ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಿಳಿಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಿರಗಂದೂರು ಅಂಗನವಾಡಿ ಕೇಂದ್ರ, ಹಾರಂಗಿ(ಯಡವಾರೆ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಐಗೂರು (ಎಸ್ಡಬ್ಲುö್ಯ) ಸರ್ಕಾರಿ ಪದವಿ ಪೂರ್ವ ಕಾಲೇಜು, ಐಗೂರು(ಎನ್ಡಬ್ಲುö್ಯ) ಸರ್ಕಾರಿ ಜೂನಿಯರ್ ಕಾಲೇಜು, ಹೊಸತೋಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.
ಮಾರ್ಚ್ ೧೪ ರಿಂದ ೧೬ ರವರೆಗೆ ದೊಡ್ಡಮಳ್ತೆ, ಗೆಜ್ಜೆಹನಕೋಡು, ಕೂಗೆಕೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ವಳಗುಂದ ಅಂಗನವಾಡಿ ಕೇಂದ್ರ, ಗೌಡಳ್ಳಿ(ಎಲ್ಡಬ್ಲುö್ಯ), (ಆರ್ಡಬ್ಲುö್ಯ) ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಸುಂಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ನಂದಿಗುAದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಿಬ್ಬೆಟ್ಟ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಗೋಪಾಲಪುರ(ಎಲ್ಡಬ್ಲುö್ಯ), (ಆರ್ಡಬ್ಲುö್ಯ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ನಡೆಯಲಿದೆ.