ಮಡಿಕೇರಿ, ಫೆ. ೨೮ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಸಮುದಾಯ ಚಟುವಟಿಕೆಗಳಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಭವನ/ ಡಾ.ಬಾಬು ಜಗಜೀವನ ರಾಂ ಭವನ/ ಮಹರ್ಷಿ ವಾಲ್ಮೀಕಿ ಭವನ ಮತ್ತು ಇತರೇ ಸಮುದಾಯಗಳ ಭವನ ನಿರ್ಮಾಣದ ಉದ್ದೇಶ ಮತ್ತು ಅಗತ್ಯ ಸೌಲಭ್ಯಗಳನ್ನು ಪರಿಗಣಿಸಿ, ವೆಚ್ಚದ ಮೊತ್ತವನ್ನು ಪರಿಷ್ಕರಿಸಿ ೨೦೧೯ ರ ಮಾರ್ಚ್, ೨೫ ರ ಆದೇಶದಲ್ಲಿ ಪರಿಷ್ಕೃತ ಮಾರ್ಗಸೂಚಿ ಹೊರಡಿಸಲಾಗಿದೆ.
ಕೆ.ಜಿ.ಬೋಪಯ್ಯ ಅವರ ಪ್ರಯತ್ನದಿಂದ ಜಿಲ್ಲೆಯ ವೀರಾಜಪೇಟೆ ತಾಲೂಕಿನ ಅಮ್ಮತ್ತಿ ಹೋಬಳಿ ಮಟ್ಟದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ೭೫ ಲಕ್ಷ ರೂ.ಅನುದಾನ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.