ಸೋಮವಾರಪೇಟೆ, ಫೆ. ೨೮: ವಿದ್ಯಾವಂತರು ಕೇವಲ ಸರ್ಕಾರಿ ಹಾಗೂ ಕಂಪೆನಿಗಳ ಉದ್ಯೋಗಕ್ಕೆ ಸೀಮಿತವಾಗದೇ ಸ್ವ ಉದ್ಯೋಗದತ್ತಲೂ ಗಮನಹರಿಸಬೇಕು. ಇರುವ ಅವಕಾಶಗಳನ್ನು ಬಳಸಿಕೊಂಡು ಜೀವನದಲ್ಲಿ ಮುಂದೆ ಬರಬೇಕು. ಕೊಡಗಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಕರೆ ನೀಡಿದರು.

ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಉದ್ಯೋಗ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಸ್ಥಳೀಯ ಸಂತ ಜೋಸೆಫರ ಪದವಿ ಕಾಲೇಜು ಇವುಗಳ ಆಶ್ರಯದಲ್ಲಿ ರಾಷ್ಟಿçÃಯ ವೃತ್ತಿ ಸೇವಾ ಯೋಜನೆಯಡಿ ಸಂತ ಜೋಸೆಫರ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯುವ ಜನಾಂಗವನ್ನು ಉದ್ಯೋಗಸ್ಥರನ್ನಾಗಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಕೇಂದ್ರ ಸರ್ಕಾರದ ಮೇಕ್ ಇನ್ ಇಂಡಿಯಾ ಮತ್ತು ಸ್ಕಿಲ್ ಇಂಡಿಯಾ ಯೋಜನೆಗಳು ಹೆಚ್ಚು ಪ್ರಯೋಜನಕಾರಿಯಾಗಿವೆ. ಸ್ವ ಉದ್ಯೋಗಕ್ಕೆ ಸಂಬAಧಿಸಿದAತೆ ಉಚಿತವಾಗಿ ವೃತ್ತಿ ತರಬೇತಿ ನೀಡಲಾಗುತ್ತಿದೆ. ಇದರ ಬಗ್ಗೆ ಮಾಹಿತಿ ಹೊಂದಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕೊಡಗಿನಲ್ಲಿ ಪ್ರವಾಸೋದ್ಯಮ ಹೆಚ್ಚು ಬೆಳವಣಿಗೆ ಕಾಣುತ್ತಿದೆ. ವಿಶ್ವಮಟ್ಟದಲ್ಲಿ ಕೊಡಗು ಗುರುತಿಸಿಕೊಳ್ಳುತ್ತಿದೆ. ಇಲ್ಲಿನ ಕೃಷಿ ಮತ್ತು ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗಿದೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉದ್ಯೋಗಕ್ಕೆ ವಿಫುಲ ಅವಕಾಶಗಳಿದ್ದು, ಯೋಜನಾಬದ್ಧವಾಗಿ ತೊಡಗಿಸಿಕೊಂಡರೆ ಯಶಸ್ಸು ಸಾಧ್ಯ ಎಂದರು.

ಯುವಜನಾAಗ ಇಂದು ಉದ್ಯೋಗ ಅರಸಿ ಹೊರ ಜಿಲ್ಲೆಗಳಿಗೆ ತೆರಳುತ್ತಿದ್ದು, ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಕ್ಷೀಣಗೊಳ್ಳುತ್ತಿದೆ. ಯುವ ಜನರು ಕೃಷಿಯತ್ತಲೂ ಗಮನ ಹರಿಸಬೇಕು. ವೈಜ್ಞಾನಿಕವಾಗಿ ಕೃಷಿ ಕೈಗೊಂಡರೆ ಲಾಭಗಳಿಸಬಹುದು. ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನವನ್ನೂ ಹೊಂದಿಕೊಳ್ಳಬೇಕೆAದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆಯ ಸಂಚಾಲಕ ಎಂ. ರಾಯಪ್ಪ ಮಾತನಾಡಿ, ಪ್ರತಿಯೋರ್ವರೂ ದುಡಿಯುವಂತಾಗಬೇಕು. ಆ ಮೂಲಕ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯಬೇಕು. ಇದಕ್ಕಾಗಿಯೇ ಕೇಂದ್ರ ಸರ್ಕಾರ ಸ್ಕಿಲ್ ಇಂಡಿಯಾ ಯೋಜನೆ ಜಾರಿಗೆ ತಂದಿದೆ. ಮೇಳದಲ್ಲಿ ೨೦ಕ್ಕೂ ಅಧಿಕ ಕಂಪೆನಿಗಳು ಭಾಗಿಯಾಗಿದ್ದು, ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗ ಪಡೆಯಲು ಸಹಕಾರಿಯಾಗಿದೆ ಎಂದರು.

ಉದ್ಯೋಗ ಮೇಳದಲ್ಲಿ ಬೆಂಗಳೂರು, ಮೈಸೂರು, ಮಂಗಳೂರು, ಹಾಸನ ಸೇರಿದಂತೆ ಸುತ್ತಮುತ್ತಲ ೨೦ ಕ್ಕೂ ಅಧಿಕ ಕಂಪೆನಿಗಳ ಸಿಬ್ಬಂದಿಗಳು ಭಾಗಿಯಾಗಿದ್ದರು. ೫೦೦ಕ್ಕೂ ಅಧಿಕ ವಿದ್ಯಾವಂತ ಯುವ ಜನಾಂಗ ಮೇಳದಲ್ಲಿ ಭಾಗಿಯಾಗಿತ್ತು.

ಕಾರ್ಯಕ್ರಮದ ವೇದಿಕೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ಉದ್ಯೋಗಾಧಿಕಾರಿ ಉಮಾ, ಕುಮಾರ್, ಪದವಿ ಕಾಲೇಜು ಪ್ರಾಂಶುಪಾಲ ಹರೀಶ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಹ್ಯಾರಿ ಮೋರಸ್, ಯೋಜನಾಧಿಕಾರಿ ಆನಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.