ಮಡಿಕೇರಿ, ಫೆ. ೨೮: ಕೆದಮುಳ್ಳೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಓಡಿಸುವಂತೆ ಪತ್ರದ ಮೂಲಕ ಮಾಡಿರುವ ಮನವಿಯ ಮೇರೆಗೆ ಕಾರ್ಯಾಚರಣೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.
ವೀರಾಜಪೇಟೆ ವಿಭಾಗದ ವೀರಾಜಪೇಟೆ ಅರಣ್ಯ ವಲಯದ ವ್ಯಾಪ್ತಿಗೆ ಬರುವ ಗ್ರಾಮಗಳಾದ ಪಾಲಂಗಾಲ, ಕೆದಮುಳ್ಳೂರು, ತೋರ, ಕರಡ ಗ್ರಾಮಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆಯನ್ನು ಮಾ. ೧ ರಂದು (ಇಂದು) ಹಮ್ಮಿಕೊಂಡಿದ್ದು, ತೋಟದ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಗ್ರಾಮಸ್ಥರು, ಶಾಲಾ ಮಕ್ಕಳು ಎಚ್ಚರಿಕೆಯಿಂದ ಇದ್ದು, ಕಾಡಾನೆ ಕಾರ್ಯಾಚರಣೆಗೆ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ವೀರಾಜಪೇಟೆ ಅರಣ್ಯ ವಲಯದ ವಲಯ ಅರಣ್ಯಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.