ಮಡಿಕೇರಿ, ಫೆ. ೨೮: ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ (ವೈ.ಹೆಚ್.ಎ.ಐ.)ದ ಜಿಲ್ಲಾ ಹಾಗೂ ಮಡಿಕೇರಿ ತಾಲೂಕು ಘಟಕದ ಆಶ್ರಯದಲ್ಲಿ ಜಾನಪದ ಕಲಾವಿದೆ, ಪದ್ಮಶ್ರೀ ಪುರಸ್ಕೃತ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಲಾಯಿತು.
ನಗರದ ಬಾಲಭವನದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ರಾಣಿ ಮಾಚಯ್ಯ ಅವರಿಗೆ ಶಾಲು, ಫಲತಾಂಬೂಲ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಸನ್ಮಾನ ಸಭಾ ಅಧ್ಯಕ್ಷತೆಯನ್ನು ವೈಹೆಚ್ಎಐ ತಾಲೂಕು ಘಟಕದ ಎ.ಎ. ಅಯ್ಯಣ್ಣ ಅವರು ವಹಿಸಿದ್ದರು. ಅತಿಥಿಗಳಾಗಿ ನಗರದ ಎಫ್ಎಂಕೆಎAಸಿ ಕಾಲೇಜು ನಿವೃತ್ತ ಪ್ರಾಂಶುಪಾಲೆ ಡಾ. ಮಂಡೇಪAಡ ಪುಷ್ಪ ಕುಟ್ಟಣ್ಣ ಭಾಗವಹಿಸಿದ್ದರು. ಸಭೆಯನ್ನು ವೈಹೆಚ್ಎಐನ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.