ಮಡಿಕೇರಿ, ಫೆ. ೨೮ : ಪೊನ್ನಂಪೇಟೆ ೬೬/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಎಫ್೧ ನಲ್ಲೂರು ಮತ್ತು ಎಫ್೨ ಬಾಳೆಲೆ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ತಾ. ೧ ರಿಂದ ೪ ರವರೆಗೆ ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಕಿರುಗೂರು, ನಲ್ಲೂರು, ಸುಳುಗೋಡು, ಬಾಳೆಲೆ, ನಿಟ್ಟೂರು, ಮತ್ತೂರು, ಬೆಸಗೂರು, ರಾಜಪುರ, ಪೊನ್ನಪ್ಪಸಂತೆ, ಕಾರ್ಮಾಡು, ದೇವನೂರು ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.