ಮಡಿಕೇರಿ ಫೆ.೨೮ : ಅಖಿಲ ಭಾರತ ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ರಣ್ದೀಪ್ ಸಿಂಗ್ ಸುರ್ಜೇವಾಲ ಅವರು ಕೊಡಗು ಜಿಲ್ಲೆಗೆ ಪ್ರಥಮ ಬಾರಿಗೆ ಭೇಟಿ ನೀಡುತ್ತಿದ್ದಾರೆ. ತಾ. ೨ ರಂದು ಅಪರಾಹ್ನ ೧.೩೦ ಗಂಟೆಗೆ ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ಕೆಪಿಸಿಸಿ ಪ್ರಮುಖರು, ಡಿಸಿಸಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಡಿಸಿಸಿ ಮುಂಚೂಣಿ ಘಟಕದ ಪ್ರಮುಖರು, ಪದಾಧಿಕಾರಿಗಳು, ವಲಯ ಕಾಂಗ್ರೆಸ್ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಪಕ್ಷದ ಹಾಲಿ, ಮಾಜಿ ಜನಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವ ನಾರಾಯಣ್, ಎಐಸಿಸಿ ಕಾರ್ಯದರ್ಶಿ, ಕೊಡಗು ಉಸ್ತುವಾರಿ ಹಾಗೂ ಕೇರಳ ಶಾಸಕ ರೋಜಿ ಜಾನ್ ಉಪಸ್ಥಿತರಿರುವರು ಎಂದು ಪಕ್ಷದ ವಕ್ತಾರ ಎ.ಎಸ್. ಟಾಟು ಮೊಣ್ಣಪ್ಪ ತಿಳಿಸಿದ್ದಾರೆ.