ಗೋಣಿಕೊಪ್ಪಲು, ಫೆ. ೨೮: ದಕ್ಷಿಣ ಕೊಡಗಿನ ಗೋಣಿಕೊಪ್ಪ ಹಾಗೂ ಬಾಳೆಲೆ ಹೋಬಳಿಯ ನಿಟ್ಟೂರು ಗ್ರಾಮ ಪಂಚಾಯಿತಿಯ ಎರಡು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವನ್ನು ಸಾಧಿಸಿದ್ದಾರೆ. ನಿಟ್ಟೂರು ಪಂಚಾಯಿತಿಗೆ ಪರಿಶಿಷ್ಟ ವರ್ಗದ ಕೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಜೆ.ಎಸ್. ಅಪ್ಪಣ್ಣ (೨೩೯) ಮತ ಪಡೆದು ಜಯ ಗಳಿಸಿದ್ದಾರೆ. ಇವರ ಪ್ರತಿಸ್ಪರ್ಧಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾದ ಅಯ್ಯಪ್ಪ (೧೪೯) ಮತ ಪಡೆದು ಸೋಲನ್ನು ಕಂಡಿದ್ದಾರೆ.
ಗೋಣಿಕೊಪ್ಪ ಗ್ರಾಮ ಪಂಚಾಯಿತಿಯ ೬ನೇ ವಾರ್ಡ್ಗೆ ನಡೆದ ಚುನಾವಣೆಯಲ್ಲಿ ಸಾಮಾನ್ಯ ಮಹಿಳಾ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಫುರಭಾನು (೩೮೧) ಮತ ಪಡೆದು ವಿಜಯಶಾಲಿಯಾದರು. ಇವರ ಪ್ರತಿಸ್ಪರ್ಧಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಲಲಿತ (೧೮೯) ಮತ ಪಡೆದು ಸೋಲನ್ನು ಅನುಭವಿಸಿದರು. ನಿಟ್ಟೂರು ಕ್ಷೇತ್ರದ ಈ ಹಿಂದಿನ ಅಭ್ಯರ್ಥಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಜಯಗಳಿಸಿದ್ದರು. ಪ್ರಸ್ತುತ ಈ ಕ್ಷೇತ್ರವನ್ನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ತಮ್ಮದಾಗಿಸಿ ಕೊಂಡಿದ್ದಾರೆ. ಗೋಣಿಕೊಪ್ಪ ೬ನೇ ವಾರ್ಡಿನಲ್ಲೂ