ಸುAಟಿಕೊಪ್ಪ, ಫೆ. ೨೮: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಕೆ ಆಗ್ರಹಿಸಿ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಂಡಿರುವ ಹಿನ್ನಲೆ ಶಿಕ್ಷಕರ ಸಂಘ ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿಗಳು ಶನಿವಾರ ಭಿತ್ತಿ ಪತ್ರ ಹಿಡಿದು ಬೆಂಬಲ ಸೂಚಿಸಿದರು.
ಪಂಜಾಬ್, ರಾಜಸ್ಥಾನ, ಛತ್ತಿಸ್ಘಡ, ಜಾಖಂಡ್, ಹಿಮಾಚಲ ಪ್ರದೇಶ ರಾಜ್ಯಗಳ ಮಾದ್ರಿಯಲ್ಲಿ ಎನ್ಪಿಎಸ್ ರದ್ದುಪಡಿಸಿ, ಒಪಿಎಸ್ ಯೋಜನೆಯನ್ನು ಜಾರಿಗೊಳಿಸುವಂತೆ ಕೊಡಗು ಜಿಲ್ಲಾ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ತಾಲೂಕು ಪ್ರಾಥಮಿಕ ಶಾಲಾ ಉಪಾಧ್ಯಕ್ಷೆ ಸೌಭಾಗ್ಯ ಹಾಗೂ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಭಿತ್ತಿ ಪತ್ರವನ್ನು ಪ್ರದರ್ಶಿಸಿದರು.
ಕರ್ನಾಟಕ ರಾಜ್ಯದ ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳಾದ ವೇತನ ಭತ್ಯೆಗಳ ಪರಿಷ್ಕರಣೆ ಹಾಗೂ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಸಂಬAಧ ಫೆ. ೨೧ ರಂದು ನಡೆದ ಕಾರ್ಯಕಾರಿಣಿ ಮತ್ತು ವೃಂದ ಸಂಘಗಳ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ತೀರ್ಮಾನದಂತೆ ರಾಜ್ಯ ಸಮಸ್ತ ಸರ್ಕಾರಿ ಅಧಿಕಾರಿ -ನೌಕರರು ಮಾ. ೧ ರಿಂದ ಕರ್ತವ್ಯಕ್ಕೆ ಗೈರು ಹಾಜರಾಗಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ.