ಮಡಿಕೇರಿ, ಫೆ. ೨೮ : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಾ. ೧೮ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಅಂದು ಬೆಳಿಗ್ಗೆ ಜಿಲ್ಲಾಡಳಿತದ ವತಿಯಿಂದ ಆಯೋಜನೆ ಮಾಡಲಾಗಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.
ನಂತರ ಮಧ್ಯಾಹ್ನ ೨.೩೦ ಗಂಟೆಗೆ ನಾಪೋಕ್ಲುವಿನಲ್ಲಿ ಜರುಗಲಿರುವ ಕೊಡವ ಕುಟುಂಬಗಳ ನಡುವಿನ ಕೌಟುಂಬಿಕ ಹಾಕಿ ಉತ್ಸವ ‘ಅಪ್ಪಚೆಟ್ಟೋಳಂಡ ಹಾಕಿ ನಮ್ಮೆ’ಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಕೆ.ಜಿ. ಬೋಪಯ್ಯ ‘ಶಕ್ತಿ’ಗೆ ತಿಳಿಸಿದ್ದಾರೆ.