ಮಡಿಕೇರಿ, ಮಾ. ೧: ವೀರಾಜಪೇಟೆ ವಕೀಲರ ಸಂಘದ ವತಿಯಿಂದ ದಿವಂಗತ ನ್ಯಾಯಮೂರ್ತಿ ಎಂ.ಪಿ. ಚಿಣ್ಣಪ್ಪ ಸ್ಮರಣಾರ್ಥ ಉಪನ್ಯಾಸ ಕಾರ್ಯಕ್ರಮವನ್ನು ತಾ. ೪ ರಂದು ಸಂಜೆ ೬ ಗಂಟೆಗೆ ವೀರಾಜಪೇಟೆ ಚಿಕ್ಕಪೇಟೆಯ ತ್ರಿವೇಣಿ ಶಾಲಾ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರು ‘ನ್ಯಾಯ ಒದಗಿಸುವಲ್ಲಿ ನ್ಯಾಯಾಧೀಶರು ಮತ್ತು ನ್ಯಾಯವಾದಿಗಳ ಪಾತ್ರ' ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕೊಡಗು ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ವಿ. ಶ್ರೀಶಾನಂದ, ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಂ.ಜಿ. ಶುಕೂರೆ ಕಮಾಲ್, ಸಿ.ಎಂ. ಪೂಣಚ್ಚ ಅವರುಗಳು ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಛ ನ್ಯಾಯಾಲಯದ ಮಹಾವಿಲೇಖನಾಧಿಕಾರಿ ಕೆ.ಎಸ್. ಭರತ್ ಕುಮಾರ್, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಂ. ಭೃಂಗೇಶ್, ದಿವಂಗತ ಎಂ.ಪಿ. ಚಿಣ್ಣಪ್ಪ ಅವರ ಪತ್ನಿ ಕಾವೇರಿ ಚಿಣ್ಣಪ್ಪ, ವಕೀಲರಾದ ನಮೃತ ಕೋಲಾರ ಹಾಗೂ ಎಂ. ಧ್ಯಾನ್ ಚಿಣ್ಣಪ್ಪ ಭಾಗವಹಿಸಲಿದ್ದಾರೆ.