ಮಡಿಕೇರಿ, ಮಾ. ೧: ಇತ್ತೀಚೆಗೆ ಬೆಟ್ಟಗೇರಿಯ ಉದಯ ಪ್ರೌಢಶಾಲೆಯಲ್ಲಿ ನಡೆದ ೧೧ನೇ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಜ್ಞಾಪಕಾರ್ಥವಾಗಿ ಉದಯ ಪ್ರೌಢಶಾಲೆಯ ಕನ್ನಡ ಮಾಧ್ಯಮ ವಿಭಾಗಕ್ಕೆ ಪ್ರಿಂಟರ್‌ಅನ್ನು ಕೊಡುಗೆಯಾಗಿ ನೀಡಲಾಯಿತು.

ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅಂಬೆಕಲ್ಲು ನವೀನ್ ಅವರು ಉದಯ ವಿದ್ಯಾಸಂಸ್ಥೆಯ ಅಧ್ಯಕ್ಷ ತಳೂರು ಎ. ಕಿಶೋರ್ ಕುಮಾರ್ ಅವರಿಗೆ ಪ್ರಿಂಟರ್‌ಅನ್ನು ಹಸ್ತಾಂತರಿಸಿದರು.

ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಮುಖ್ಯ ಶಿಕ್ಷಕಿ ಎಂ.ಪಿ. ಕವಿತಾ ಹಾಗೂ ಶಾಲಾ ಅಧ್ಯಾಪಕ ವೃಂದ, ಸಿಬ್ಬಂದಿ ವರ್ಗದವರು ಹಾಜರಿದ್ದರು.