ಮಡಿಕೇರಿ, ಮಾ. ೧: ವೀರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬAಧಿಸಿದAತೆ ಮಡಿಕೇರಿಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರ ೬ ರಿಂದ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮಗ್ರಿಗಳ ಕಿಟ್ಗಳನ್ನು, ೯ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶ್ರಮಿಕ್ ಟ್ಯಾಬ್ಗಳನ್ನು, ಪೇಂಟಿAಗ್ ಟೂಲ್ ಕಿಟ್, ಕಾರ್ಪೇಂಟರ್ ಟೂಲ್ ಕಿಟ್, ಪ್ಲಂಬಿAಗ್ ಟೂಲ್ ಕಿಟ್ಗಳನ್ನು ಜಿಲ್ಲಾ ಆಡಳಿತ ಭವನದ ಮುಂಭಾಗದಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ವಿತರಿಸಿದರು.
ಈ ಸಂದರ್ಭ ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎA. ಯತ್ನಟ್ಟಿ, ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.