ಮಡಿಕೇರಿ, ಮಾ. ೧: ವೇತನ, ಭತ್ಯೆ ಪರಿಷ್ಕರಣೆ ಹಾಗೂ ಹಳೇ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಕರೆ ನೀಡಿದ್ದ ಮುಷ್ಕರಕ್ಕೆ ಕೊಡಗು ಜಿಲ್ಲೆಯಲ್ಲಿಯೂ ಬೆಂಬಲ ವ್ಯಕ್ತವಾಯಿತು. ಕೊಡಗು ಜಿಲ್ಲೆಯ ಬಹುತೇಕ ಎಲ್ಲಾ ಇಲಾಖೆಗಳ ನೌಕರರು ಕೆಲಸ ಸ್ಥಗಿತಗೊಳಿಸಿ ಮುಷ್ಕರಕ್ಕೆ ಇಳಿದಿದ್ದರು. ಆದರೆ, ಮಧ್ಯಾಹ್ನದ ವೇಳೆಗೆ ಸರ್ಕಾರಿ ನೌಕರರ ಬೇಡಿಕೆಗೆ ಸರ್ಕಾರ ಸ್ಪಂದಿಸುವ ಬಗ್ಗೆ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ಹಿಂಪಡೆಯಲಾಯಿತು.
ಸರ್ಕಾರಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಜಿಲ್ಲೆಯ ಬಹುತೇಕ ಎಲ್ಲಾ ಇಲಾಖೆಗಳ ಕಚೇರಿಗಳಲ್ಲೂ ನೌಕರರ ಗೈರು ಹಾಜರಾತಿ ಕಂಡುಬAತು. ಜಿಲ್ಲಾಧಿಕಾರಿ ಕಚೇರಿ, ತಾಲೂಕು ಕಚೇರಿ, ಜಿಲ್ಲಾ ಪಂಚಾಯಿತಿ ಕಚೇರಿಗಳಲ್ಲಿ ಮುಷ್ಕರದ ಕಾವು ಕಂಡುಬAತು. ಜಿಲ್ಲಾ ಮತ್ತು ತಾಲೂಕು ದಂಡಾಧಿಕಾರಿಗಳು ಕರ್ತವ್ಯದಲ್ಲಿದ್ದರಾದರೂ ಸಿಬ್ಬಂದಿಗಳಿರಲಿಲ್ಲ. ಕೊಡಗು ಜಿಲ್ಲಾ ಸರ್ಕಾರಿ ನೌಕರರ ಸಂಘ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬAಧಿಸಿದ ಆಯಾ ಸಂಘಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದವು. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್ ನೇತೃತ್ವದಲ್ಲಿ ಜಮಾಯಿಸಿದ್ದ ಸಂಘ ಪದಾಧಿಕಾರಿ ಗಳು ಹಾಗೂ ಸದಸ್ಯರು ಹೊರಗುತ್ತಿಗೆ ಆಧಾರದಡಿ ಕಾರ್ಯನಿರ್ವಹಿಸುವ ನೌಕರರನ್ನು ಕೂಡ ಮುಷ್ಕರಕ್ಕೆ ಬೆಂಬಲಿಸಿ ಕರ್ತವ್ಯಕ್ಕೆ ಹಾಜರಾಗದಂತೆ ಮನವೊಲಿಸುತ್ತಿದ್ದ ದೃಶ್ಯ ಕಂಡುಬAತು. ಮುಷ್ಕರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದೆ ಸರ್ಕಾರಿ ಕಚೇರಿಗಳಿಗೆ ಆಗಮಿಸಿದ ಕೆಲ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳಲಾಗದೆ ಹಿಂತಿರುಗುತ್ತಿದ್ದ ಸನ್ನಿವೇಶವೂ ಎದುರಾಯಿತು. ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳ ತಪಾಸಣೆ ನಡೆಯಿತು. ಎಲ್ಲೆಡೆ ಸರ್ಕಾರಿ ನೌಕರರು ಕರ್ತವ್ಯ ಸ್ಥಗಿತಗೊಳಿಸಿದ್ದರಾದರೂ, ಸರ್ಕಾರಿ ಆಸ್ಪತ್ರೆಯಲ್ಲಿನ ನೌಕರರು ಕೆಲಸ ಸ್ಥಗಿತಗೊಳಿಸದೆ ಮಾನವೀಯ ನೆಲೆಗಟ್ಟಿನಲ್ಲಿ ರೋಗಿಗಳಿಗೆ ತೊಂದರೆ ಆಗದಂತೆ ಕಪ್ಪುಪಟ್ಟಿ ಧರಿಸಿ ಕೆಲಸ ನಿರ್ವಹಿಸುವ ಮೂಲಕ ಮುಷ್ಕರಕ್ಕೆ ಬೆಂಬಲ ಸೂಚಿಸಿದರು. ತಪಾಸಣೆಗೆ ಬರುತ್ತಿದ್ದ ಬಡರೋಗಿಗಳಿಗೆ ಇದರಿಂದಾಗಿ ಯಾವುದೇ ತೊಂದರೆ ತಲೆದೋರಲಿಲ್ಲ. ಸರ್ಕಾರಿ ಶಾಲೆಗಳಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ನಗರಸಭೆಯಲ್ಲಿ ಕುಡಿಯುವ ನೀರು ಸರಬರಾಜು ವಿಭಾಗದ ಸಿಬ್ಬಂದಿ ಮಾತ್ರ ಕಾರ್ಯ ನಿರ್ವಹಿಸಿದ್ದು, ಹೊರಗುತ್ತಿಗೆಯ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದ್ದಾರೆ. ಉಳಿದಂತೆ
(ಮೊದಲ ಪುಟದಿಂದ) ಯಾವುದೇ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿಲ್ಲ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ನಲ್ಲಿ ಸಿಇಓ, ತಹಶೀಲ್ದಾರ್ ಕರ್ತವ್ಯಕ್ಕೆ ಹಾಜರಾಗಿದ್ದರು. ಹೊರಗುತ್ತಿಗೆ ಸಿಬ್ಬಂದಿ ಕಾರ್ಯನಿರ್ವಹಿಸಿದರಾದರೂ, ಉಳಿದ ನೌಕರರುಗಳು ಗೈರು ಹಾಜರಾಗಿದ್ದರು. ಸರ್ಕಾರಿ ಬಸ್ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳದ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ವ್ಯವಸ್ಥೆ ಎಂದಿನAತೆ ಮುಂದುವರೆಯಿತು. ಮಧ್ಯಾಹ್ನದ ವೇಳೆಗೆ ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸುವ ಆದೇಶ ಹೊರಡಿಸಿದ ಬಳಿಕ ಜಿಲ್ಲಾ ಸರ್ಕಾರಿ ನೌಕರರ ಸಂಘ ಮುಷ್ಕರವನ್ನು ಹಿಂಪಡೆದುಕೊAಡಿತು.ಶನಿವಾರಸAತೆ
ಶನಿವಾರಸAತೆ ವ್ಯಾಪ್ತಿಯಲ್ಲಿ ಸರಕಾರಿ ಶಾಲಾ-ಕಾಲೇಜು ಸೇರಿದಂತೆ ವಿವಿಧ ಸರಕಾರಿ ಇಲಾಖೆಗಳ ಕಚೇರಿಗಳು ಬಂದ್ ಆಗಿತ್ತು. ಸರಕಾರಿ ನೌಕರರು ಕಚೇರಿಗೆ ಬಾರದೆ ಮುಷ್ಕರಕ್ಕೆ ಬೆಂಬಲ ನೀಡಿದರು. ಸರಕಾರಿ ಆಸ್ಪತ್ರೆ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳ ಬಾಗಿಲು ಎಂದಿನAತೆ ತೆರೆದಿದ್ದರೂ ಖಾಯಂ ಸರಕಾರಿ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಲಿಲ್ಲ. ಶನಿವಾರಸಂತೆ ಪಟ್ಟಣದ ನಾಡ ಕಚೇರಿಯ ಬಾಗಿಲು ಎಂದಿನAತೆ ತೆರೆಯಲಾಗಿದ್ದರೂ ಕಚೇರಿಯ ದಿನಗೂಲಿ ನೌಕರರು ಮಾತ್ರ ಹಾಜರಾಗಿದ್ದರು. ದುಂಡಳ್ಳಿ, ಆಲೂರು-ಸಿದ್ದಾಪುರ, ನಿಡ್ತ, ಹಂಡ್ಲಿ ಗ್ರಾ.ಪಂ. ಕಚೇರಿಗಳಲ್ಲಿ ದಿನಗೂಲಿ ನೌಕರರು, ನೀರುಗಂಟಿ ಸಿಬ್ಬಂದಿ ಎಂದಿನAತೆ ಕರ್ತವ್ಯಕ್ಕೆ ಹಾಜರಾಗಿದ್ದರೂ ಪಿಡಿಓ, ಕಾರ್ಯದರ್ಶಿಗಳು ಗೈರು ಹಾಜರಾಗಿದ್ದರು. ಶನಿವಾರಸಂತೆ, ಆಲೂರು-ಸಿದ್ದಾಪುರ ಸರಕಾರಿ ಆರೋಗ್ಯ ಕೇಂದ್ರಗಳು ಎಂದಿನAತೆ ಕಾರ್ಯನಿರ್ವಹಿಸಿದವು. ಸರಕಾರಿ ಶಾಲೆ, ಕಾಲೇಜುಗಳನ್ನು ಮುಚ್ಚಲಾಗಿತ್ತು. ಪೊಲೀಸ್ ಠಾಣೆ, ಅರಣ್ಯ ಇಲಾಖೆ ಹೊರತುಪಡಿಸಿದಂತೆ ಎಲ್ಲಾ ಸರಕಾರಿ ಇಲಾಖೆಯ ಕಚೇರಿಗಳು ಬಂದ್ ಆಗಿದ್ದವು.
ಪೊನ್ನಂಪೇಟೆ
ಸರ್ಕಾರಿ ಶಾಲೆ ಶಿಕ್ಷಕರು ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಕಾರಣ ಸರ್ಕಾರಿ ಶಾಲೆಗಳಿಗೆ ರಜೆ ನೀಡಲಾಗಿತ್ತು. ಖಾಸಗಿ ಶಾಲೆಗಳು ಎಂದಿನAತೆ ನಡೆದವು. ಮುಷ್ಕರ ಹಿನ್ನೆಲೆ ಬೆಳಿಗ್ಗೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ನೌಕರರು ಮಧ್ಯಾಹ್ನದ ನಂತರ ಕರ್ತವ್ಯ ನಿರ್ವಹಿಸಿದರು. ಪೊನ್ನಂಪೇಟೆ ತಾಲೂಕು ಕಚೇರಿ, ಸಬ್ರಿಜಿಸ್ಟರ್ ಕಚೇರಿ ಸೇರಿದಂತೆ ತಾಲೂಕಿನ ಬಹುತೇಕ ಸರ್ಕಾರಿ ಕಚೇರಿಯ ಸರ್ಕಾರಿ ಸಿಬ್ಬಂದಿಗಳು ಕರ್ತವ್ಯಕ್ಕೆ ಗೈರು ಹಾಜರಾಗಿದ್ದರು.ಚೆಯ್ಯಂಡಾಣೆ
ಚೆಯ್ಯAಡಾಣೆ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕೂಡ ಮುಷ್ಕರಕ್ಕೆ ಬೆಂಬಲ ವ್ಯಕ್ತವಾಯಿತು.
ಸರಕಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಿ ಗ್ರೂಪ್ ನೌಕರರು ಮಾತ್ರ ಎಂದಿನAತೆ ಕಾರ್ಯನಿರ್ವಹಿಸಿದರು. ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ದೊರೆಯದೆ ಹಿಂತಿರುಗುವAತಾಯಿತು. ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ರಜೆ ಘೋಷಿಸಲಾಗಿತ್ತು.ವೀರಾಜಪೇಟೆ
ರಾಜ್ಯ ಸರಕಾರಿ ನೌಕರರ ಸಂಘದ ನೇತೃತ್ವದಲ್ಲಿ ಸರಕಾರಿ ನೌಕರರು ಮುಷ್ಕರ ನಡೆಸಿದ್ದರಿಂದ ವೀರಾಜಪೇಟೆ ತಾಲೂಕಿನಾದ್ಯಂತ ಸರಕಾರಿ ಸೇವೆ ಲಭ್ಯವಿಲ್ಲದೆ ನಾಗರಿಕರಿಗೆ ಅನಾನುಕೂಲ ಉಂಟಾಗಿತ್ತು.
ತಾಲೂಕು ಕಚೇರಿ ಬಿಕೋ ಎನ್ನುತ್ತಿತ್ತು. ಬಹುತೇಕ ಸರಕಾರಿ ನೌಕರರು ಮುಷ್ಕರವನ್ನು ಬೆಂಬಲಿಸಿ ಕರ್ತವ್ಯಕ್ಕೆ ಗೈರಾಗಿದ್ದರೆ, ಕೆಲವು ಕಚೇರಿಗಳಲ್ಲಿ ಹಿರಿಯ ಅಧಿಕಾರಿಗಳು ಮಾತ್ರ ಹಾಜರಾಗಿದ್ದರು. ಕಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇಲ್ಲದೆ ಯಾವುದೇ ಕೆಲಸ ನಡೆಯಲಿಲ್ಲ. ಬಹುತೇಕ ಸರಕಾರಿ ಕಚೇರಿಗಳಲ್ಲಿ ಇದೇ ಸ್ಥಿತಿ ಕಂಡುಬAತು. ಎಲ್ಲಾ ಕಡೆಗಳಲ್ಲೂ ನೌಕರರ ಸಂಘದ ಪದಾಧಿಕಾರಿಗಳು ಬೆಳಿಗ್ಗೆಯಿಂದಲೂ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಮುಷ್ಕರಕ್ಕೆ ಬೆಂಬಲ ಕೋರುತ್ತಿದ್ದುದ್ದು ಕಂಡುಬAತು.
ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಸೇವೆಗಳು ಬಹುತೇಕ ಬಂದ್ ಆಗಿತ್ತು.
ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಪ್ರೌಢ ಶಾಲಾ ಶಿಕ್ಷಕರ ಸಂಘವು ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ಪ್ರೌಢಶಾಲಾ ಶಿಕ್ಷಕರು ತಮ್ಮ ಸೇವೆಗೆ ಗೈರಾಗಿರುವ ಹಿನ್ನೆಲೆಯಲ್ಲಿ ಬುಧವಾರ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇಂದು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಹಿಂದಿ ಪೂರ್ವಭಾವಿ ಪರೀಕ್ಷೆ ನಡೆಯಬೇಕಿತ್ತು. ಆದರೆ ಮುಷ್ಕರದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿತ್ತು.
ದಾಖಲೆಗಳನ್ನು ಮಾಡಿಸಿಕೊಳ್ಳಲು ಬಂದವರಿಗೆ ಮುಷ್ಕರದಿಂದ ತೊಂದರೆ ಉಂಟಾಯಿತು. ತಾಲೂಕು ಆಸ್ಪತ್ರೆಗಳ ಮುಂದೆ ರೋಗಿಗಳು ಪರದಾಡುವಂತಾಗಿತ್ತು.ರಾಜ್ಯ ಸರ್ಕಾರಿ ನೌಕರರ ಮುಷ್ಕರದ ಕರೆಗೆ ಬೆಂಬಲಿಸಿ ಕುಶಾಲನಗರ ತಾಲೂಕಿನ ಬಹುತೇಕ ಸರ್ಕಾರಿ ಕಚೇರಿಗಳು ಶಾಲಾ-ಕಾಲೇಜುಗಳ ನೌಕರರು ಅಧಿಕಾರಿಗಳು ಕಚೇರಿಗೆ ಹಾಜರಾಗಲಿಲ್ಲ. ಕುಶಾಲನಗರದ ನಾಡಕಚೇರಿ ತಾಲೂಕು ತಹಶೀಲ್ದಾರ್ ಕಚೇರಿ ಉಪ ನೋಂದಣಾಧಿಕಾರಿ ಕಚೇರಿ ಅರಣ್ಯ ಇಲಾಖೆ ಕಾವೇರಿ ನೀರಾವರಿ ನಿಗಮ ಸೇರಿದಂತೆ ಬಹುತೇಕ ಎಲ್ಲಾ ಸರ್ಕಾರಿ ಶಿಕ್ಷಣ ಕೇಂದ್ರಗಳು ಬಂದ್ ಆಗಿದ್ದವು.
ಕಚೇರಿ ಕೆಲಸಕ್ಕೆ ಆಗಮಿಸಿದ ನಾಗರಿಕರು ಪೆಚ್ಚುಮೋರೆ ಹಾಕಿಕೊಂಡು ಹಿಂತಿರುಗುತ್ತಿದ್ದ ದೃಶ್ಯ ಕಂಡುಬAತು. ಕುಶಾಲನಗರ ಪುರಸಭೆ ನೌಕರರಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದವರು ಮತ್ತು ಕೆಲವು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದುದು ಕಂಡುಬAತು. ಇಂದು ನಡೆಯಬೇಕಾಗಿದ್ದ ಎಸ್ ಎಸ್ಎಲ್ಸಿ ಪೂರ್ವಭಾವಿ ಪರೀಕ್ಷೆ ಮುಂದೂಡಲಾಗಿತ್ತು.
ನೌಕರರಿಗೆ ವೇತನ ಹೆಚ್ಚಳ ಮಾಡಿದ ಆದೇಶ ಹೊರ ಬಿದ್ದ ಬೆನ್ನಲ್ಲೇ ಮುಷ್ಕರ ವಾಪಸ್ ತೆಗೆದುಕೊಳ್ಳಲಾಯಿತು. ಕೆಲವು ಕಚೇರಿಗಳು ಕಾರ್ಯ ನಿರ್ವಹಿಸದಿದ್ದರೂ ಕುಶಾಲನಗರ ಉಪನೋಂದಣಾಧಿಕಾರಿ ಕಚೇರಿ ಅಧಿಕಾರಿ ಸಿಬ್ಬಂದಿಗಳು ಮಧ್ಯಾಹ್ನ ಎರಡು ಗಂಟೆ ನಂತರ ಕೆಲಸದಲ್ಲಿ ತೊಡಗಿದ ದೃಶ್ಯ ಕಂಡುಬAತು.ನೌಕರರ ಮುಷ್ಕರದಿಂದಾಗಿ ಸೋಮವಾರಪೇಟೆ ತಾಲೂಕು ಕಚೇರಿ ಸೇರಿದಂತೆ ಇತರ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳು ಸ್ತಬ್ಧಗೊಂಡಿದ್ದವು.
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘವು ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸೋಮವಾರಪೇಟೆ ತಾಲೂಕಿನ ಸರ್ಕಾರಿ ನೌಕರರ ಸಂಘವು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ದ್ದರಿಂದ ಸರ್ಕಾರಿ ಕಚೇರಿಗಳು ಸಾರ್ವಜನಿಕ ಕೆಲಸ ಕಾರ್ಯಗಳಿಂದ ದೂರ ಉಳಿದಿದ್ದವು.
ಸರ್ಕಾರಿ ನೌಕರರ ಮುಷ್ಕರ ದಿಂದಾಗಿ ಇಲ್ಲಿನ ತಾಲೂಕು ಕಚೇರಿಗೆ ಆಗಮಿಸಿದ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳು ಆಗದೇ ಇದ್ದುದರಿಂದ ಬರಿಗೈಯಲ್ಲಿ ವಾಪಸ್ ತೆರಳಿದರು. ತಾಲೂಕು ಕಚೇರಿಯ ಲ್ಲಿರುವ ಕಂದಾಯ ಇಲಾಖೆ, ಸರ್ವೆ ಇಲಾಖೆ, ಭೂಮಿ ಕೇಂದ್ರ, ಅಭಿಲೇ ಖಾಲಯ, ಉಪನೋಂದಣಾಧಿಕಾರಿ ಗಳ ಕಚೇರಿ, ಆರ್ಟಿಸಿ ಕೌಟರ್, ನೆಮ್ಮದಿ ಕೇಂದ್ರ, ಆಹಾರ ಇಲಾಖೆ ಸೇರಿದಂತೆ ಇತರ ಎಲ್ಲಾ ಇಲಾಖಾ ಕಚೇರಿಗಳ ಕೊಠಡಿಗಳು ಬಂದ್ ಆಗಿದ್ದವು.
ಮುಷ್ಕರ ನಡೆಯುವುದೋ ಇಲ್ಲವೋ ಎಂಬ ಸಂಶಯದೊAದಿಗೆ ಕೆಲಸ ಕಾರ್ಯಗಳಿಗಾಗಿ ಕಚೇರಿಗೆ ಬಂದ ಸಾರ್ವಜನಿಕರು ನಿರಾಸೆಯಿಂದ ಹಿಂತಿರುಗಿದರು. ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ತಹಶೀಲ್ದಾರ್ರೊಂದಿಗೆ ಮಾತುಕತೆ ನಡೆಸಿ, ಮುಷ್ಕರಕ್ಕೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು. ಇತರ ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನ್ಯಾಯೋಚಿತ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿದ್ದು, ತಾವುಗಳೂ ಸಹ ಸಹಕಾರ ನೀಡಬೇಕೆಂದರು.
ಇದಾಗಿ ಕೆಲ ಸಮಯ ಕೊಠಡಿಯಲ್ಲಿಯೇ ಇದ್ದ ತಹಶೀಲ್ದಾರ್, ಸಾರ್ವಜನಿಕರು ಕಚೇರಿಗೆ ಆಗಮಿಸದ ಹಿನ್ನೆಲೆ ತಮ್ಮ ಕಚೇರಿಯನ್ನು ಬಂದ್ ಮಾಡಿ ಕೆಳ ಮಹಡಿಯ ಕೊಠಡಿಯೊಂದರಲ್ಲಿ ಕುಳಿತುಕೊಂಡರು.
ಈ ಸಂದರ್ಭ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಪ್ರದೀಪ್, ಪದಾಧಿಕಾರಿಗಳಾದ ಎನ್.ಎಂ. ನಾಗೇಶ್, ವಿ.ಜಿ. ದಿನೇಶ್, ಗೋಪಿನಾಥ್, ಕೆ.ಎಸ್. ಪ್ರಸನ್ನ, ಡಿ.ಪಿ. ಧರ್ಮಪ್ಪ ಸೇರಿದಂತೆ ಇತರರು ಹಾಜರಿದ್ದರು.