ಸಿದ್ದಾಪುರ, ಮಾ. ೧: ಹುಲಿ ದಾಳಿಗೆ ಕಾಡುಕೋಣ ಸಾವನ್ನಪ್ಪಿರುವ ಘಟನೆ ಸಿದ್ದಾಪುರದ ಬೀಟಿಕಾಡು ಕಾಫಿ ತೋಟದಲ್ಲಿ ಸಂಭವಿಸಿದೆ.
ಸಿದ್ದಾಪುರ ಸಮೀಪದ ಬಿ.ಬಿ.ಟಿ.ಸಿ ಸಂಸ್ಥೆಗೆ ಸೇರಿದ ಬೀಟಿಕಾಡು ಕಾಫಿ ತೋಟದಲ್ಲಿ ಬೆಳಿಗ್ಗೆ ಕಾರ್ಮಿಕರು ಕೆಲಸ ಮಾಡುತ್ತಿರುವ ವೇಳೆ ಕಾಡುಕೋಣ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ತಡರಾತ್ರಿ ಹುಲಿ ದಾಳಿ ನಡೆಸಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ವೀರಾಜಪೇಟೆ ವಲಯ ಅರಣ್ಯಾಧಿಕಾರಿ ಕಳ್ಳೀರ ದೇವಯ್ಯ, ಉಪವಲಯ ಅರಣ್ಯಾಧಿಕಾರಿ ಸಂಜೀತ್ ಸೋಮಯ್ಯ, ಆರ್.ಆರ್.ಟಿ ತಂಡದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹುಲಿ ದಾಳಿಯಿಂದಾಗಿ ತೋಟದ ಕಾರ್ಮಿಕರು ಹಾಗೂ ಸ್ಥಳೀಯರು ಭಯಭೀತರಾಗಿದ್ದಾರೆ. ಇತ್ತೀಚೆಗೆ ಹುಲಿ ದಾಳಿಯಿಂದ ದಕ್ಷಿಣ ಕೊಡಗಿನಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಕಳೆದ ಕೆಲವು ತಿಂಗಳುಗಳಿAದ ಮಾಲ್ದಾರೆ, ಬಿ.ಬಿ.ಟಿ.ಸಿ ಸೇರಿದಂತೆ ಸುತ್ತಮುತ್ತಲ ತೋಟದಲ್ಲಿ ಹುಲಿಯೊಂದು ಓಡಾಡುತ್ತಿದ್ದು, ಹುಲಿಯನ್ನು ಸೆರೆ ಹಿಡಿಯಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.