ಮಡಿಕೇರಿ, ಮಾ. ೨: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವು ತಾ. ೩ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ನಡೆಯಲಿದೆ.
ಶಾಲಾ ಶಿಕ್ಷಣ, ಸಾಕ್ಷರತೆ, ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ. ಬೋಪಯ್ಯ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ. ಸುಜಾ ಕುಶಾಲಪ್ಪ, ಎಸ್.ಎಲ್. ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾ ಮರಾಠ ಸಮಾಜದ ಅಧ್ಯಕ್ಷ ಎಸ್.ಎನ್. ರಾಜಾರಾವ್, ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ವೆಂಕಟ ನಾಯಕ್, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಿ.ಪಂ. ಸಿಇಓ ಡಾ. ಎಸ್. ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಇತರರು ಪಾಲ್ಗೊಳ್ಳಲಿದ್ದಾರೆ.