ಮಡಿಕೇರಿ, ಮಾ. ೨: ಕೊಡಗು ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ಸೋಮವಾರಪೇಟೆ ವಕೀಲರ ಸಂಘ ಸಂಯುಕ್ತಾಶ್ರಯದಲ್ಲಿ ಸೋಮವಾರಪೇಟೆಯ ವಕೀಲರ ಭವನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ತಾ. ೪ ರಂದು ಮಧ್ಯಾಹ್ನ ೧ ಗಂಟೆಗೆ ಸೋಮವಾರಪೇಟೆಯ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ನಡೆಯಲಿದೆ.

ಸರ್ವೋಚ್ಚ ನಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಲೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಕೊಡಗು ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ವಿ. ಶ್ರೀಶಾನಂದ, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಂ.ಜಿ. ಶುಕುರೆ ಕಮಲ್, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕ ಉಚ್ಚ ನ್ಯಾಯಾಲಯದ ಮಹಾವಿಲೇಖನಾಧಿಕಾರಿ ಕೆ.ಎಸ್. ಭರತ್‌ಕುಮಾರ್, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಎಂ.ಭೃAಗೇಶ್, ಸೋಮವಾರಪೇಟೆ ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಪದ್ಮನಾಭ, ಸೋಮವಾರಪೇಟೆ ವಕೀಲರ ಸಂಘದ ಕಾರ್ಯದರ್ಶಿ ಎಸ್.ಜೆ. ಹೇಮಚಂದ್ರ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ನಾಗರಾಜು ಇತರರು ಪಾಲ್ಗೊಳ್ಳಲಿದ್ದಾರೆ.