ಮಡಿಕೇರಿ, ಮಾ. ೨: ಕೊಡಗು ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ವೀರಾಜಪೇಟೆ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ವೀರಾಜಪೇಟೆ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ ಭೂಮಿ ಪೂಜೆ ತಾ. ೪ ರಂದು ಸಂಜೆ ೫.೩೦ ಗಂಟೆಗೆ ವೀರಾಜಪೇಟೆಯ ಕಾವೇರಿ ಕಾಲೇಜು ಬಳಿ ನಡೆಯಲಿದೆ.

ಸರ್ವೋಚ್ಛ ನಾಯಾಲಯದ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ. ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಲೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಕೊಡಗು ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ವಿ.ಶ್ರೀಶಾನಂದ, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಂ.ಜಿ. ಶುಕುರೆ ಕಮಲ್, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕ ಉಚ್ಚ ನ್ಯಾಯಾಲಯದ ಮಹಾ ವಿಲೇಖನಾಧಿಕಾರಿ ಕೆ.ಎಸ್. ಭರತ್‌ಕುಮಾರ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಎಂ.ಭೃAಗೇಶ್, ವೀರಾಜಪೇಟೆ ವಕೀಲರ ಸಂಘದ ಅಧ್ಯಕ್ಷರಾದ ಐ.ಆರ್. ಪ್ರಮೋದ್, ವೀರಾಜಪೇಟೆ ವಕೀಲರ ಸಂಘದ ಕಾರ್ಯದರ್ಶಿ ಎಂ.ಕೆ.ದಿನೇಶ್, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ನಾಗರಾಜು ಇತರರು ಪಾಲ್ಗೊಳ್ಳಲಿದ್ದಾರೆ.