ಮಡಿಕೇರಿ, ಮಾ. ೩: ಜೆಡಿಎಸ್ ಪಕ್ಷದಲ್ಲಿ ರಾಜ್ಯ ವಕ್ತಾರರಾಗಿದ್ದು ಇತ್ತೀಚೆಗೆತಾನೆ ಈ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದ ಮೇರಿಯಂಡ ಸಂಕೇತ್ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಇದೀಗ ಪ್ರಮುಖ ಜವಾಬ್ದಾರಿ ನೀಡಲಾಗಿದೆ. ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರರನ್ನಾಗಿ ಸಂಕೇತ್ ಪೂವಯ್ಯ ಅವರನ್ನು ನೇಮಕ ಮಾಡಲಾಗಿದೆ. ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಕೆ.ಪಿ.ಸಿ.ಸಿ.ಯ ಮಾಧ್ಯಮ ಹಾಗೂ ಸಂವಹನ ವಿಭಾಗದ ರಾಜ್ಯ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಈ ಆದೇಶ ಹೊರಡಿಸಿದ್ದಾರೆ.