ಸೋಮವಾರಪೇಟೆ, ಮಾ. ೩: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ರಾಷ್ಟಿçÃಯ ವಿಜ್ಞಾನ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದಲ್ಲಿ ಏಕಕಾಲಕ್ಕೆ ನಡೆದ ಆನ್‌ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಪಿ.ಬಿ. ಸಂಜನ ಜಿಲ್ಲಾ ಹಂತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಅದೇ ಶಾಲೆಯ ಕೆ. ಸೌಜನ್ಯ ದ್ವಿತೀಯ ಮತ್ತು ಸ್ನೇಹಶ್ರೀ ತೃತೀಯ ಸ್ಥಾನ ಪಡೆದಿದ್ದಾರೆ.