ಮಡಿಕೇರಿ, ಮಾ. ೩: ಪೊನ್ನಂಪೇಟೆ ಸಂತ ಅಂತೋಣಿ ವಿದ್ಯಾಸಂಸ್ಥೆಯಲ್ಲಿ ೧೦ನೇ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ವೀರಾಜಪೇಟೆ ತಾಲೂಕಿನ ಬಿ.ಒ. ಶ್ರೀಶೈಲ ಬೀಳಗಿ ಮತ್ತು ಸಿ.ಒ ಅಯ್ಯಪ್ಪ ಅವರನ್ನು ಸನ್ಮಾನಿಸಲಾಯಿತು. ಹಾಗೇ ಹಾಕಿಯಲ್ಲಿ ರಾಷ್ಟçಮಟ್ಟಕ್ಕೆ ಆಯ್ಕೆಯಾದ ಹಾಕಿ ಆಟಗಾರರನ್ನು ಸನ್ಮಾನಿಸಲಾಯಿತು. ಶಾಲೆ ಕಾಲೇಜು ಮಕ್ಕಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂತ ಅಂತೋಣಿ ವಿದ್ಯಾಸಂಸ್ಥೆಯ ಸಂಚಾಲಕರಾದ ಫಾ ಡೇವಿಡ್ ಸಗಯಾ ರಾಜ್, ಕಾಲೇಜು ಪ್ರಾಂಶುಪಾಲರಾದ ಶ್ರೀ ಶಂಭು ಕಾರ್ಯಪ್ಪ, ಪ್ರೌಢ ಶಾಲೆ ಯ ಮುಖ್ಯ ಶಿಕ್ಷಕಿ ಶ್ರೀಮತಿ ರಜನಿ ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.