ಮುಳ್ಳೂರು, ಮಾ. ೩: ಸಮೀಪದ ನಿಡ್ತ ಗ್ರಾ.ಪಂ.ಗೆ ಸೇರಿದ ಮುಳ್ಳೂರು ಗ್ರಾಮದಲ್ಲಿ ಅಗ್ನಿಅವಘಡದಿಂದ ೨ ಎಕರೆ ಕಾಫಿ ತೋಟ ಆಹುತಿಯಾಗಿದೆ. ಮುಳ್ಳೂರು ಗ್ರಾಮದ ಎಚ್.ವಿ. ದಿವಾಕರ್ ಎಂಬವರಿಗೆ ಸೇರಿದ ಕಾಫಿ ತೋಟದಲ್ಲಿ ಜಾಗದಿಂದ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ತೋಟದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರು ಬೆಂಕಿ ನಂದಿಸಲು ಮುಂದಾದರೂ ಸಂಪೂರ್ಣವಾಗಿ ಬೆಂಕಿ ನಂದಿಸಲು ಕುಶಾಲನಗರ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ ಅಗ್ನಿಶಾಮಕ ದಳದ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮಸ್ಥರು ಬೆಂಕಿನAದಿಸುವಲ್ಲಿ ಯಶಸ್ವಿಯಾಗಿದ್ದಾರೆ.