ಮಡಿಕೇರಿ, ಮಾ. ೩: ಪ್ರತಿಷ್ಠಿತವಾದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಕೊಡಗಿನ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನ ಆಡಳಿತ ಮಂಡಳಿಯಿAದ ಸನ್ಮಾನಿಸಲಾಯಿತು.
ಬ್ಯಾಂಕ್ನ ಸಭಾಂಗಣದಲ್ಲಿ ಅಧ್ಯಕ್ಷ ಬಾಂಡ್ ಗಣಪತಿ, ಉಪಾಧ್ಯಕ್ಷ ಹರೀಶ್ ಪೂವಯ್ಯ, ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಸರಳ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಪ್ರಶಸ್ತಿ ವಿಜೇತರನ್ನು ಗೌರವಿಸಲಾಯಿತು.