ನಾಪೋಕ್ಲು, ಮಾ. ೩: ಸಮೀಪದ ಕಕ್ಕಬೆ ವ್ಯಾಪ್ತಿಯ ಇಗ್ಗುತ್ತಪ್ಪ(ಮಲ್ಮ) ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ವ್ಯಾಪಕವಾಗಿ ಹಬ್ಬಿದೆ. ಶುಕ್ರವಾರ ಸಂಜೆ ಹೊತ್ತಿಗೆ ದೇವನೆಲೆ ಮಲ್ಮ ಬೆಟ್ಟಶ್ರೇಣಿಯಲ್ಲಿ ಕಾಡ್ಗಿಚ್ಚು ವ್ಯಾಪಕವಾಗಿ ಉರಿಯುತ್ತಿದೆ. ಈಚೆಗೆ ತಡಿಯಂಡಮೋಳ್ ಬೆಟ್ಟದಲ್ಲೂ ಕಾಡ್ಗಿಚ್ಚು ಕಾಣಿಸಿಕೊಂಡಿತ್ತು. ಕಡಿದಾದ ಪ್ರದೇಶವಾಗಿರುವುದರಿಂದ ಅಗ್ನಿಶಾಮಕÀ ದಳದಿಂದ ನಿಯಂತ್ರಿಸಲು ಅಸಾಧ್ಯವೆಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು ಬೆಂಕಿ ನಂದಿಸಲು ಅರಣ್ಯ ಇಲಾಖೆ ಶ್ರಮಿಸುತ್ತಿದೆ.