ಸೋಮವಾರಪೇಟೆ, ಮಾ. ೫: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾ. ೬ ರಂದು (ಇಂದು) ಒಕ್ಕಲಿಗರ ಸಮುದಾಯ ಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಮತ್ತು ಸಾಧನಾ ಸಮಾವೇಶ ನಡೆಯಲಿದೆ ಎಂದು ಯೋಜನಾ ಧಿಕಾರಿ ರೋಹಿತ್ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ ೭ ಗಂಟೆಗೆ ಪೂಜೆ ಪ್ರಾರಂಭವಾಗಲಿದೆ. ೧೦ ಗಂಟೆಗೆ ಮಹಾ ಮಂಗಳಾರತಿ, ೧೧ ಗಂಟೆಗೆ ಸಾಧನಾ ಸಮಾವೇಶ ಹಾಗೂ ಮಧ್ಯಾಹ್ನ ೧.೩೦ ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವುದು.

ಸಾಧನಾ ಸಮಾವೇಶವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಅಂಕನಳ್ಳಿ ತಪೋಕ್ಷೇತ್ರದ ಮನೆಹಳ್ಳಿ ಮಠದ ಮಹಾಂತ ಶಿವಲಿಂಗ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಪೂಜಾ ಸಮಿತಿ ಅಧ್ಯಕ್ಷ ಡಿ.ಕೆ. ಸುಧಾಕರ್ ವಹಿಸಲಿದ್ದು, ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ವಸಂತ್ ಸಾಲ್ಯಾನ್ ಸೌಲಭ್ಯ ವಿತರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಎಸ್.ಎನ್. ನರಗುಂದ, ಜಿಲ್ಲಾ ಜನಜಾಗೃತಿ ಸ್ಥಾಪಕ ಅಧ್ಯಕ್ಷ ಅಭಿಮನ್ಯುಕುಮಾರ್, ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್ ಉಪಸ್ಥಿತರಿರುವರು.