ಮಡಿಕೇರಿ, ಮಾ. ೫: ರಾಷ್ಟçಪಿತ ಮಹಾತ್ಮಾ ಗಾಂಧಿ ಸ್ಮಾರಕ ನಿರ್ಮಾಣಕ್ಕೆ ಮೊದಲ ಹಂತವಾಗಿ ಸರಕಾರ ರೂ. ೫೦ ಲಕ್ಷ ಅನುದಾನ ಬಿಡುಗಡೆ ಮಾಡಿದೆ ಎಂದು ಸರ್ವೋದಯ ಸಮಿತಿ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಇರುವ ಗಾಂಧಿ ಮಂಟಪದ ಬಳಿ ಗಾಂಧೀಜಿಯವರ ಚಿತಾಭಸ್ಮವನ್ನು ಶಾಶ್ವತ ನೆಲೆಯಲ್ಲಿ ಇರಿಸುವ ಸಂಬAಧ ಗಾಂಧಿ ಸ್ಮಾರಕ ನಿರ್ಮಾಣಕ್ಕಾಗಿ ಸರ್ವೋದಯ ಸಮಿತಿ ಮೂಲಕ ರೂ. ೧.೫ ಕೋಟಿ ವೆಚ್ಚದ ಅಂದಾಜು ಪಟ್ಟಿ ಹಾಗೂ ನಕಾಶೆಯನ್ನು ಸರಕಾರಕ್ಕೆ ಸಲ್ಲಿಸಲಾಗಿತ್ತು. ಇದೀಗ ಸರಕಾರ ಮೊದಲ ಹಂತವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಜಿಲ್ಲಾಧಿಕಾರಿಗಳ ಖಾತೆಗೆ ರೂ. ೫೦ ಲಕ್ಷ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.
ಸ್ಮಾರಕ ನಿರ್ಮಾಣ ಕಾರ್ಯವನ್ನು ಶೀಘ್ರ ಆರಂಭಿಸಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಹಾಗೂ ಗಾಂಧೀಜಿಗೆ ನಮನ ಸಲ್ಲಿಸಲು ಬರುವವರಿಗೆ ಗಾಂಧೀಜಿ ಯವರ ಜೀವನ ಚರಿತ್ರೆ, ಸ್ವಾತಂತ್ರö್ಯ ಹೋರಾಟದ ಬಗ್ಗೆ ಮಾಹಿತಿ ಸಿಗುವಂತಾಗಬೇಕು. ಇದರಿಂದ ಅಧ್ಯಯನ ಮಾಡುವವರಿಗೂ ಅನುಕೂಲವಾಗಲಿದೆ. ಸಮಿತಿ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ಸಮಿತಿ ಕಾರ್ಯದರ್ಶಿ ಎಸ್.ಐ. ಮುನೀರ್ ಅಹಮ್ಮದ್ ಮಾತನಾಡಿ, ಗಾಂಧಿ ಸ್ಮಾರಕಕ್ಕೆ ಜಾಗ ಹಾಗೂ ಅನುದಾನ ಬಿಡುಗಡೆ ಮಾಡಿಸುವಲ್ಲಿ ಶಾಸಕ ಕೆ.ಜಿ. ಬೋಪಯ್ಯ ಅವರ ಪ್ರಯತ್ನ ಸಾಕಷ್ಟಿದೆ. ಸಮಿತಿಯ ಮನವಿಗೆ ಸ್ಪಂದಿಸಿದ ಶಾಸಕರು, ಸರಕಾರದ ಮಟ್ಟದಲ್ಲಿ ವ್ಯವಹರಿಸಿ ಅನುದಾನ ಮಂಜೂರು ಮಾಡಿಸಿಕೊಟ್ಟಿದ್ದಾರೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಸಹಕಾರ್ಯದರ್ಶಿ ಕೆ.ಟಿ. ಬೇಬಿ ಮ್ಯಾಥ್ಯೂ, ಖಜಾಂಚಿ ಕಾನೆಹಿತ್ಲು ಮೊಣ್ಣಪ್ಪ, ಲಿಯಾಕತ್ ಆಲಿ ಇದ್ದರು.