ಗೋಣಿಕೊಪ್ಪಲು, ಮಾ. ೫: ವಾಣಿಜ್ಯ ನಗರ ಗೋಣಿಕೊಪ್ಪಲುವಿನಲ್ಲಿ ೨ ದಿನಗಳ ಕಾಲ ನಡೆದ ೧೬ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆರಂಭದ ದಿನ ಮುಂಜಾನೆ ೯ ಗಂಟೆಗೆ ನಗರದ ಪಾಲಿಬೆಟ್ಟ ರಸ್ತೆಯಿಂದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಮೆರವಣಿಗೆಯನ್ನು ಉದ್ಯಮಿ ಗುಮ್ಮಟೀರ ಕಿಲನ್ ಗಣಪತಿ ಉದ್ಘಾಟಿಸಿದರು.
ಮೆರವಣಿಗೆಯಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಟೈಲರ್ ಅಸೋಸಿಯೇಷನ್, ಸವಿತಾ ಸಮಾಜ, ಸ್ತಿçÃಶಕ್ತಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಅನೇಕ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಾಗಿದರು.
ಮೆರವಣಿಗೆಯಲ್ಲಿ ಡೊಳ್ಳುಕುಣಿತ, ಪೂಜಾಕುಣಿತ, ಪಟಕುಣಿತ, ವೀರಗಾಸೆ ವಿಶೇಷ ಆಕರ್ಷಣೆಯಾಗಿದ್ದವು. ಬ್ಯಾಂಡ್ಸೆಟ್, ಕೊಡಗಿನ ವಾಲಗ, ಗೊಂಬೆಗಳು, ಸ್ತಬ್ಧಚಿತ್ರ ಮೆರವಣಿಗೆಗೆ ಮತ್ತಷ್ಟು ಮೆರಗು ನೀಡಿದವು.
ಸಮ್ಮೇಳನದ ಅಧ್ಯಕ್ಷೆ ಡಾ. ಎಂ.ಪಿ. ರೇಖಾ ವಸಂತ್ ವಾಹನದ ಮುಂದೆ ಮಂಗಳವಾದ್ಯ, ಪೂರ್ಣಕುಂಭ ಹೊತ್ತ ಮಹಿಳೆಯರು, ಸ್ಕೌಟ್ ಮತ್ತು ಗೈಡ್ಸ್, ಎನ್ಸಿಸಿ ವಿದ್ಯಾರ್ಥಿಗಳು ಶಿಸ್ತು ಬದ್ಧ ಹೆಜ್ಜೆ ಹಾಕಿದರು.
ಬಿಸಿಲಿನ ನಡುವೆ ರಾಜಬೀದಿಯಲ್ಲಿ ಮೆರವಣಿಗೆ ಸಾಗಿಬಂತು. ಮೆರವಣಿಗೆಯು ಉಮಾಮಹೇಶ್ವರಿ ದೇವಾಲಯ ದಾಟಿ ಸರಕಾರಿ ಪ್ರಾಥಮಿಕ ಶಾಲೆಯ ಮೈದಾನಕ್ಕೆ ಪ್ರವೇಶ ಮಾಡಿತು.
ಸಮ್ಮೇಳನದ ಅಧ್ಯಕ್ಷರೊಂದಿಗೆ ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ. ಕೇಶವ್ ಕಾಮತ್, ತಾಲೂಕು ಅಧ್ಯಕ್ಷ ಕೋಳೆರ ದಯಾ ಚಂಗಪ್ಪ, ಹೋಬಳಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಬಿ.ಎನ್. ಪ್ರಕಾಶ್ ವೇದಿಕೆ ಪ್ರವೇಶ ಮಾಡಿದರು.
ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಶಾಸಕ ಕೆ.ಜಿ. ಬೋಪಯ್ಯ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಕನ್ನಡ ಮತ್ತು ಸಂಸ್ಕೃತಿ ಶಾಶ್ವತವಾಗಿ ಉಳಿಸಬೇಕು ಎಂದು ಶಾಸಕ ಕೆ.ಜಿ. ಬೋಪಯ್ಯ ಕರೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿಯನ್ನು ಶಾಶ್ವತವಾಗಿ ಉಳಿಸುವ ಸಲುವಾಗಿ ಇತ್ತೀಚಿನ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಸುತ್ತೋಲೆಗಳು ಕನ್ನಡದಲ್ಲೇ ಇರಬೇಕು ಎಂಬ ಮಸೂದೆ ಹೊರಡಿಸಲಾಗಿದೆ. ಆಂಗ್ಲ ಮಾಧ್ಯಮ ಶಾಲೆಗಳಲ್ಲೂ ಕನ್ನಡವನ್ನು ಪ್ರಥಮ ಭಾಷೆಯಾಗಿ ಕಲಿಸುವ ಕೆಲಸವಾಗಬೇಕು ಎಂದರು.
ಸಮ್ಮೇಳನದ ಅಧ್ಯಕ್ಷೆ ಡಾ.ಎಂ. ಪಿ. ರೇಖಾ ರವರಿಗೆ ಕನ್ನಡ ಸಮ್ಮೇಳನದ ಧ್ವಜ ಹಸ್ತಾಂತರಿಸಿದ ೧೫ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಮಂಡೇಪAಡ ಗೀತಾ ಮಂದಣ್ಣ ಮಾತನಾಡಿ, ಸಾಹಿತ್ಯ ಕಮ್ಮಟಗಳು ಏರ್ಪಡಿಸಿ ಯುವ ಬರಹಗಾರರಿಗೆ ಮಾರ್ಗದರ್ಶನ ನೀಡುವುದು ಒಳಿತು ಸಾಹಿತಿಗಳ ಅರ್ಹತೆ ಗುರುತಿಸಿ ಅವರ ಸಾಧನೆಗೆ ಪ್ರಶಸ್ತಿ ನೀಡುವಂತಾಗಬೇಕು ಎಂದರು. ಈ ವೇಳೆ ೫ ಪುಸ್ತಕ ಬಿಡುಗಡೆ ಕಾರ್ಯಕ್ರಮ ಜರುಗಿತು.
ಬಲು ವಿಶಿಷ್ಟತೆ ಹೊಂದಿರುವ ಕೊಡಗಿನ ಸಂಸ್ಕೃತಿಯನ್ನು ದಾಖಲಿಸುವ ಕೆಲಸ ಆಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮನುಬಳಿಗಾರ ತಿಳಿಸಿದರು.
ಸ್ತಿçÃಶಕ್ತಿ ಸಂಘದವರು ತೆರೆದಿದ್ದ ತಿಂಡಿ ತಿನಿಸು ಅಲಂಕಾರಿಕ ವಸ್ತುಗಳು, ಉಡುಪುಗಳ ಮಳಿಗೆಗಳು ಜನರ ಗಮನ ಸೆಳೆಯಿತು.