ಚೆಯ್ಯಂಡಾಣೆ, ಮಾ. ೫: ಚೆಯ್ಯಂಡಾಣೆಯ ಲಕ್ಷಿö್ಮ ಮಹಿಳಾ ಸಮಾಜದಲ್ಲಿ ನರಿಯಂದಡ ಗ್ರಾಮ ಪಂಚಾಯಿತಿಯ ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರಿಗೆ ಕೊಡಗು ಜಿಲ್ಲಾ ಪಂಚಾಯಿತಿ ಕೃಷಿ ಇಲಾಖೆ ವತಿಯಿಂದ ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು.

ಕೃಷಿ ಇಲಾಖೆಯ ಅಧಿಕಾರಿ ನಾರಾಯಣ ರೆಡ್ಡಿ ಎರೆಹುಳು ಗೊಬ್ಬರ ಉತ್ಪಾದನೆ ಮತ್ತು ಬಳಕೆ, ಸಾವಯವ ಗೊಬ್ಬರ ಮತ್ತು ಅವುಗಳ ಮಹತ್ವ, ಹಸಿರಲೆ ಗೊಬ್ಬರಗಳ ಬಳಕೆ, ಕೊಡಗು ಜಿಲ್ಲೆಗೆ ಸೂಕ್ತವಾದ ಭತ್ತದ ತಳಿಗಳು ಮತ್ತು ಭತ್ತದ ಬೀಜೋಪಚಾರಗಳು, ಅಜೋಲದಿಂದ ಸಾವಯವ ಕೃಷಿಕರಿಗೆ ವರದಾನ, ಪೌಷ್ಟಿಕ ಬೆಳೆ ವಿಮೆ ಸಂರಕ್ಷಣೆ, ರೈತರ ಮಕ್ಕಳಿಗೆ ರೈತ ವಿದ್ಯಾನಿಧಿ ಶಿಷ್ಯವೇತನ ಪಡೆಯುವ ಬಗ್ಗೆ ಹಾಗೂ ಇನ್ನಿತರ ಹಲವು ಮಾಹಿತಿಗಳನ್ನು ನೀಡಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಬಿ.ಎಸ್. ಪುಷ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಮುಂಡಿಯೋಳAಡ ಈರಪ್ಪ, ಪೆಮ್ಮಂಡ ಕಾವೇರಮ್ಮ ಸಂಜೀವಿನಿ ಒಕ್ಕೂಟದ ಎಂಬಿಕೆ ವಸಂತಿ, ಕೃಷಿ ಸಖಿ, ಪಶು ಸಖಿ, ಗ್ರಾಮಸ್ಥರು ಇದ್ದರು.