ಕೂಡಿಗೆ, ಮಾ. ೫: ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ಮಂಡಲದ ಕುಶಾಲನಗರ ತಾಲೂಕು ವ್ಯಾಪ್ತಿಯ ಕಾರ್ಯಕರ್ತರ ಸಭೆ ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚು ರಂಜನ್ ಅವರ ಮಾದಾಪುರದ ನಿವಾಸದ ಆವರಣದಲ್ಲಿ ನಡೆಯಿತು.
ಸೋಮವಾರಪೇಟೆ ಮಂಡಲ ಅಧ್ಯಕ್ಷ ಮನುಕುಮಾರ್ ರೈ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಶಾಸಕ ಅಪ್ಪಚ್ಚುರಂಜನ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಜಿಲ್ಲೆ, ರಾಜ್ಯ ಹಾಗೂ ದೇಶದ ಸುಭದ್ರತೆಗೆ ಜಾತ್ಯಾತೀತವಾಗಿ ಬಿಜೆಪಿ ಪಕ್ಷವನ್ನು ಬೆಂಬಲಿಸುವ ಅಗತ್ಯವಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ನರೇಂದ್ರ ಮೋದಿ ಅವಧಿಯ ಸರಕಾರ ಅತ್ಯಂತ ಪ್ರಾಮಾಣಿಕವಾಗಿ ಜನಸೇವೆ ಮಾಡಿದೆ. ದೇಶ ಅಭಿವೃದ್ಧಿ, ಜನರ ಅಭಿವೃದ್ಧಿಗೆ ಬಿಜೆಪಿಯ ಅವಶ್ಯಕತೆಯಿದೆ ಎಂದರು.
ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ, ದ.ಕ.ಜಿಲ್ಲೆಯ ಪ್ರಭಾರಿ ಬಿ.ಬಿ.ಭಾರತೀಶ್ ಮಾತನಾಡಿ, ಮುಂಬರುವ ವಿಧಾನಸಭಾ, ಸಂಸತ್ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಬೇಕಿದೆ. ಜನರ ಆಸೆ, ಆಕಾಂಕ್ಷೆಗಳನ್ನು ಪೂರೈಸುವ ಸರಕಾರವಾಗಿ ಬಿಜೆಪಿ ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿದೆ ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಕೆ.ಲೋಕೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಬಿಜೆಪಿ ಸರಕಾರದ ಸಾಧನೆಗಳ ಬಗ್ಗೆ ವಿವರಿಸಿದರು. ತಾಲೂಕು ಎಸ್.ಸಿ.ಮೋರ್ಚಾದ ಅಧ್ಯಕ್ಷ ರಾಮಕೃಷ್ಣ ಮಾಜಿ ಎಂಎಲ್ಸಿ ಸುನಿಲ್ ಸುಬ್ರಮಣಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ಎಂಎಲ್ಸಿ ಎಸ್.ಜಿ ಮೇದಪ್ಪ, ಜಿಪಂ ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಮಾಜಿ ಸದಸ್ಯೆ ಮಂಜುಳಾ, ತಾಪಂ ಮಾಜಿ ಉಪಾಧ್ಯಕ್ಷ ಅಭಿಮನ್ಯು ಕುಮಾರ್, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ದರ್ಶನ್ ಜೋಯಪ್ಪ, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಮಂಜುಳಾ ಸುಬ್ರಮಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೃತ್ ರಾಜ್, ಕಾರ್ಯದರ್ಶಿ ಪುಷ್ಪಾ ನಾಗೇಶ್, ಕುಶಾಲನಗರ ಪುರಸಭೆ ಅಧ್ಯಕ್ಷ ಜೈವರ್ಧನ್, ಕುಶಾಲನಗರ ಬಿಜೆಪಿ ಅಧ್ಯಕ್ಷ ಉಮಾಶಂಕರ್, ಎಸ್.ಟಿ.ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಭಾಕರ್, ತಾಲೂಕು ಮಾಜಿ ಅಧ್ಯಕ್ಷ ಕರುಂಬಯ್ಯ, ತಾಲೂಕು ಯುವ ಮೋರ್ಚಾದ ಕೃಷ್ಣಪ್ಪ, ಗೌತಮ್, ಮೋಕ್ಷಿತ್, ಚಂದ್ರಶೇಖರ್, ಸೋಮವಾರಪೇಟೆ ಪಪಂ ಮಾಜಿ ಅಧ್ಯಕ್ಷೆ ಸುಮಾ ಸುದೀಪ್, ಸುಮೇಶ್ ಸೇರಿದಂತೆ ವಿವಿಧ ಘಟಕಗಳ ಪ್ರಮುಖರು ಇದ್ದರು. ಇದೇ ಸಂದರ್ಭ ವಿವಿಧ ಪಕ್ಷಗಳನ್ನು ತೊರೆದ ಕಾರ್ಯಕರ್ತರು, ನಿವೃತ್ತ ಅಧಿಕಾರಿಗಳು ಬಿಜೆಪಿಗೆ ಸೇರ್ಪಡೆಯಾದರು.