ಮಡಿಕೇರಿ, ಮಾ. ೫: ಜಿಂಕೆ ಚರ್ಮ ಮಾರಾಟಕ್ಕೆ ಯತ್ನಿಸಿದ ಆರೋಪಿಯನ್ನು ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ಮೂಲತಃ ಶಿವಮೊಗ್ಗದ ತೀರ್ಥ ನಾಯಕ ಬಂಧಿತ ಆರೋಪಿ.
ಮಡಿಕೇರಿ ನಗರದ ಮಂಗಳೂರು ರಾಷ್ಟಿçÃಯ ಹೆದ್ದಾರಿಯ ಬದಿಯಲ್ಲಿ ತೀರ್ಥ ನಾಯಕ ಎಂಬಾತನು ಸರಕಾರದ ಪರವಾನಗೆ ಇಲ್ಲದೆ ಅಕ್ರಮವಾಗಿ ಜಿಂಕೆಯ ೩ ಚರ್ಮಗಳನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಪ್ರಯತ್ನಿಸುತ್ತಿರುವಾಗ ಪತ್ತೆ ಮಾಡಿ
(ಮೊದಲ ಪುಟದಿಂದ) ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ. ಶರತ್ಚಂದ್ರ ನಿರ್ದೇಶನದ ಮೇರೆಗೆ, ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಕೆ.ಬಿ. ವಿಶ್ವನಾಥ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿಎಸ್ಐ ಸಿ.ಯು. ಸವಿ, ಹೆಡ್ಕಾನ್ಸ್ಟೇಬಲ್ಗಳಾದ ಶೇಖರ್, ರಾಘವೇಂದ್ರ, ಯೋಗೇಶ್, ಉಮೇಶ್, ಮೋಹನ್ ಮತ್ತು ಕಾನ್ಸ್ಟೇಬಲ್ಗಳಾದ ಸ್ವಾಮಿ ಮತ್ತು ಮಂಜುನಾಥ ಪಾಲ್ಗೊಂಡಿದ್ದರು.