ಗೋಣಿಕೊಪ್ಪಲು, ಮಾ. ೫: ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್‌ನ ಮಹಿಳಾ ಘಟಕದಿಂದ ಮಹಿಳಾ ದಿನಾಚರಣೆ ತಾ. ೭ ರಂದು ಗೋಣಿ ಕೊಪ್ಪಲುವಿನ ಪ್ರಾಥಮಿಕ ಶಾಲಾ ಮೈದಾನದಲ್ಲಿ ವಿಶೇಷ ರೀತಿಯಲ್ಲಿ ಆಯೋಜನೆ ಮಾಡಲಾಗಿದೆ ಎಂದು ಪೊನ್ನಂಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕೋಳೆರ ಭಾರತಿ ತಿಳಿಸಿದರು. ಪೊನ್ನಂಪೇಟೆಯಲ್ಲಿ ಆಯೋಜನೆಗೊಂಡಿದ್ದ ಮಾಧ್ಯಮ ಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಮಹಿಳೆಯರು ವಾರ್ಷಿಕವಾಗಿ ಒಂದೆಡೆಯಾಗಿ ಸೇರಲು ಮಹಿಳಾ ದಿನಾಚರಣೆ ಯನ್ನು ಹಮ್ಮಿಕೊಳ್ಳಲಾಗಿದೆ. ಮುಂಜಾನೆಯಿAದ ಸಂಜೆಯವರೆಗೂ ಮಹಿಳೆಯರಿಗಾಗಿ ವಿವಿಧ ರೀತಿಯ ಆಟೋಟಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ ಎಂದರು.

ಮಹಿಳಾ ಕಾಂಗ್ರೆಸ್‌ನ ಗೋಣಿಕೊಪ್ಪ ವಲಯ ಅಧ್ಯಕ್ಷೆ ಧನಲಕ್ಷಿö್ಮ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ ೧೦ ಗಂಟೆಗೆ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಕಾರ್ಯಕ್ರಮವನ್ನು ಉದ್ಘಾಟಿಸ ಲಿದ್ದಾರೆ. ಮಹಿಳಾ ದಿನಾಚರಣೆ ಅಂಗವಾಗಿ ಮುಖ್ಯ ಭಾಷಣ ಗಾರರಾಗಿ ಕಾಂಗ್ರೆಸ್ ಮುಖಂಡ ಮೇರಿಯಂಡ ಸಂಕೇತ್ ಪೂವಯ್ಯ ಭಾಗವಹಿಸಲಿದ್ದಾರೆ. ಸಭಾ ಕಾರ್ಯ ಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ವಕ್ತಾರ ಹೈಕೋರ್ಟ್ ಹಿರಿಯ ವಕೀಲ ಎ.ಎಸ್. ಪೊನ್ನಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಸಿ.ಎಸ್. ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ಗೋಣಿಕೊಪ್ಪ ನಗರ ಕಾಂಗ್ರೆಸ್ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಮಾಜಿ ಅಧ್ಯಕ್ಷ ಕೊಳ್ಳಿಮಾಡ ಅಜಿತ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ಭಾರತಿ ತಿಳಿಸಿದರು. ಗೋಷ್ಠಿಯಲ್ಲಿ ಮಹಿಳಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕರ್ತಮಾಡ ರಮ್ಯ, ಗೋಣಿಕೊಪ್ಪ ವಲಯ ಅಧ್ಯಕ್ಷೆ ಧನಲಕ್ಷಿö್ಮ, ಮಹಿಳಾ ಘಟಕದ ಕಾರ್ಯದರ್ಶಿ ಯಾಶ್ಮಿನ್, ಸದಸ್ಯ ರಾದ ನೂರೆರ ಧನ್ಯ, ಕೊಂಗAಡ ಮಮಿತ ಉಪಸ್ಥಿತರಿದ್ದರು.