ಮಡಿಕೇರಿ, ಮಾ.೫ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಗರದ ರಾಜಾಸೀಟು ಉದ್ಯಾನವನದಲ್ಲಿ ನಿರ್ಮಾಣವಾದ ಸಾಹಸ ಕ್ರೀಡೆಯನ್ನು ಶಾಸಕರಾದ ಕೆ.ಜಿ.ಬೋಪಯ್ಯ ಮತ್ತು ಎಂ.ಪಿ.ಅಪ್ಪಚ್ಚು ರಂಜನ್ ಅವರು ಶುಕ್ರವಾರ ವೀಕ್ಷಿಸಿದರು.
ನಂತರ ಮಾತನಾಡಿದ ಶಾಸಕರಾದ ಕೆ.ಜಿ. ಬೋಪಯ್ಯ ಅವರು ರಾಜಾಸೀಟು ಆಕರ್ಷಣೀಯ ಸ್ಥಳವಾಗಿದೆ. ತೋಟಗಾರಿಕೆ ಮತ್ತು ಜಿಲ್ಲಾಡಳಿತದಿಂದ ಬೇರೆ ಬೇರೆ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದೊಂದು ವಿನೂತನ ಕಾರ್ಯಕ್ರಮವಾಗಿದೆ. ಖಾಸಗಿ ಸಹಭಾಗಿತ್ವದಲ್ಲಿ ಸಾಹಸ ಕ್ರೀಡೆಗೆ ಚಾಲನೆ ನೀಡಲಾಗಿದೆ ಎಂದರು.
ತಾ. ೧೮ ರಂದು ಮುಖ್ಯಮಂತ್ರಿ ಅವರು ಗ್ರೇಟರ್ ರಾಜಸೀಟು ಉದ್ಯಾನವನ ಉದ್ಘಾಟಿಸಲಿದ್ದಾರೆ. ರಾಜಾಸೀಟು ಒಳ್ಳೆಯ ಪ್ರೇಕ್ಷಣೀಯ ಸ್ಥಳವಾಗಿದೆ ಎಂದರು. ಮುಂದಿನ ದಿನಗಳಲ್ಲಿ ಈ ರೀತಿಯ ಸಾಹಸ ಕ್ರೀಡೆಗೆ ಸಂಬAಧಿಸಿದAತೆ ಕೊಡಗಿನ ಅನೇಕ ಭಾಗಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದರು.
ಈಗಾಗಲೇ ಕೊಡಗಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಿದ್ದು, ಪ್ರವಾಸಿಗರು ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾಹಸ ಕ್ರೀಡೆಗಳಂತಹ ಅಭಿವೃದ್ಧಿ ಯೋಜನೆಗಳು ಪ್ರವಾಸಿಗರನ್ನು ಆಕರ್ಷಿಸಲಿವೆ ಎಂದು ಅವರು ಹೇಳಿದರು. ಬಳಿಕ ನಗರದ ರಾಜಾಸೀಟು ಉದ್ಯಾನವನದಲ್ಲಿ ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರ್ಮಾಣವಾದ ಸಾಹಸ ಕ್ರೀಡಾ ವಿಭಾಗವನ್ನು ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್ ಅವರು ಉದ್ಘಾಟಿಸಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ, ನಗರಸಭೆ ಅಧ್ಯಕ್ಷೆÀ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ನಾಯಕ್, ಹಿರಿಯ ಸಹಾಯಕ ನಿರ್ದೇಶಕ ಪ್ರಮೋದ್, ಕೊಡಗು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಇತರರು ಇದ್ದರು.