ಸೋಮವಾರಪೇಟೆ, ಮಾ. ೫: ಕೊಡಗು ಜಿಲ್ಲಾ ನ್ಯಾಯಾಂಗ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ಸೋಮವಾರಪೇಟೆ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಇಲ್ಲಿನ ನ್ಯಾಯಾಲಯ ಸಂಕೀರ್ಣದಲ್ಲಿ ವಕೀಲರ ಭವನ ಕಟ್ಟಡ ನಿರ್ಮಾಣಕ್ಕೆ ಸರ್ವೋಚ್ಛ ನಾಯಾಲಯದ ನ್ಯಾಯಾಧೀಶರಾದ ಎ.ಎಸ್. ಬೋಪಣ್ಣ ಅವರು ಭೂಮಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಆದಷ್ಟು ಬೇಗ ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸಿ ಬೃಹತ್ ಕಾರ್ಯಕ್ರಮ ಆಯೋಜಿಸಿ ಉದ್ಘಾಟನಾ ಕಾರ್ಯಕ್ರಮ ಮಾಡುವಂತೆ ಸಲಹೆ ನೀಡಿದರು.

ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಕೊಡಗು ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ವಿ. ಶ್ರೀಶಾನಂದ, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಂ.ಜಿ. ಶುಕುರೆ ಕಮಲ್, ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ, ಮಹಾ ವಿಲೇಖನಾಧಿಕಾರಿ ಕೆ.ಎಸ್. ಭರತ್‌ಕುಮಾರ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಂ. ಭೃಂಗೇಶ್, ಸ್ಥಳೀಯ ನ್ಯಾಯಾಲಯದ ನ್ಯಾಯಾಧೀಶರಾದ ಗೋಪಾಲಕೃಷ್ಣ, ವಕೀಲರ ಸಂಘದ ಅಧ್ಯಕ್ಷರಾದ ಕೆ.ಎಸ್. ಪದ್ಮನಾಭ ಇದ್ದರು.