ಮಡಿಕೇರಿ, ಮಾ. ೬: ಮಡಿಕೇರಿಯಿಂದ ಮಂಗಳೂರು ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಹೆಬ್ಬಲಸು ಮರದ ತುಂಡುಗಳನ್ನು ಸಾಗಿಸುತ್ತಿದ್ದ ಮಂಗಳೂರು ಅಸೈಗೋಳಿ ಮಂಜನಾಡಿ ಗ್ರಾಮದ ಮಹಮ್ಮದ್ ಸಫ್ವಾನ್ ಎ.ಹೆಚ್. (೨೬) ಎಂಬಾತನನ್ನು ಸಂಪಾಜೆಯಲ್ಲಿ ಅರಣ್ಯ ಇಲಾಖೆ ಬಂಧಿಸಿದ್ದು, ವಾಹನವನ್ನು ಹಾಗೂ ೧೨ ಹೆಬ್ಬಲಸು ಮರದ ನಾಟಾಗಳನ್ನು ವಶಪಡಿಸಿಕೊಂಡಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆ ಕೈಗೊಳ್ಳಲಾಗಿದೆ.

ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪೂವಯ್ಯ ಎ.ಟಿ., ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಮೊಯಿಷಿನ್ ಬಾಷಾ ಹಾಗೂ ವಲಯ ಅರಣ್ಯಾಧಿಕಾರಿ ಅನನ್ಯಕುಮಾರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಂಪಾಜೆ ಅರಣ್ಯ ತನಿಖಾ ಠಾಣೆಯಲ್ಲಿ ಕಾರ್ಯನಿರತರಾಗಿದ್ದ ಉಪ ವಲಯ ಅರಣ್ಯಾಧಿಕಾರಿ ಬಸವರಾಜಪ್ಪ, ವಿನಯ ಕೃಷ್ಣ ಎಂ.ಸಿ., ಗಸ್ತು ಅರಣ್ಯ ಪಾಲಕರಾದ ನಾಗರಾಜ್ ಎಸ್., ಕಾರ್ತಿಕ್ ಡಿ., ವಾಹನ ಚಾಲಕರಾದ ಶಿವಪ್ರಸಾದ್, ಮನೋಜ್ ಹಾಗೂ ಇತರೆÀ ಸಿಬ್ಬಂದಿಗಳು ಪಾಲ್ಗೊಂಡಿದ್ದರು.