ಮಡಿಕೇರಿ, ಮಾ. ೬: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರೀನ್ ಸಿಟಿ ಫೋರಂ ಸಹಯೋಗದಲ್ಲಿ ತಾ.೮ ರಂದು ಬೆಳಿಗ್ಗೆ ೭.೩೦ ಗಂಟೆಗೆ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ “ಆರೋಗ್ಯವಂತ ಮಹಿಳೆಯಿಂದ ಆರೋಗ್ಯಕರ ಭಾರತ” ಎನ್ನುವ ಘೋಷ ವಾಕ್ಯದೊಂದಿಗೆ ಮತದಾನದ ಮಹತ್ವ ಮತ್ತು ವಾಯುಮಾಲಿನ್ಯ ತಡೆಯುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಸೈಕ್ಲೊಥಾನ್ ಜಾಥಾ ನಡೆಯಲಿದೆ.

ಈ ಜಾಥಾವನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಉದ್ಘಾಟಿಸಲಿದ್ದಾರೆ. ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಹೊರಟು ಜನರಲ್ ತಿಮ್ಮಯ್ಯ ವೃತ್ತ-ಸ್ಕಾ÷್ವಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ-ಕೆಎಸ್‌ಆರ್‌ಟಿಸಿ ಬಸ್‌ಸ್ಟಾö್ಯಂಡ್-ಕೈಗಾರಿಕಾ ಬಡಾವಣೆ-ರೇಸ್‌ಕೋರ್ಸ್ ರಸ್ತೆ ಮೂಲಕ ಗ್ರೇಟರ್ ರಾಜಾಸೀಟುವರೆಗೆ ಜಾಥಾ ನಡೆಯಲಿದೆ.